9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ
ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶ್ರೀಶಂಕರೇಶ್ವರ ದೇವಸ್ಥಾನ ಸೇವಾ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂತರ 12 ಗಂಟೆಗೆ ಧರ್ಮಸಮಾರಂಭ ಏರ್ಪಡಿಸಲಾಗಿದ್ದು ಈ ಸಮಾರಂಭದ ದಿವ್ಯಸಾನಿಧ್ಯವನ್ನು ಮೂಲೆಗದ್ದ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಹಿಸಿ ಆಶೀರ್ವಚನ ನೀಡುವರು.
ಸಮಾರಂಭದ ಆಧ್ಯಕ್ಷತೆಯನ್ನು ಶ್ರೀಶಂಕರೇಶ್ವರ ದೇವಸ್ಥಾನ ಸೇವಾ ಸಮಿತಿಯ ಆಧ್ಯಕ್ಷ ವಾಸುದೇವ ಶೇಟ್ ವಹಿಸುವರು ಈ ಧಾರ್ಮಿಕ ಧರ್ಮಸಭೆಯ ನಂತರ ಶ್ರೀಶಂಕರೇಶ್ವರ ಸ್ವಾಮಿಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್