ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.!!
ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ ದಾಳಿ ನಡೆಸಲಾಗಿತ್ತು.
ಗಾಂಜಾ ಸಾಗಾಟ ಮಾಡುತ್ತಿದ್ದ ಸತ್ಯಸಾಯಿ ನಗರದ ನಿವಾಸಿ ಹುಸೇನ್ ಬಿ (35) ಈಕೆಯನ್ನು ವಶಕ್ಕೆ ಪಡೆದು ಅಂದಾಜು ಮೌಲ್ಯ 4,50,000 /- ರೂ ಗಳ 7ಕೆಜಿ 590 ಗ್ರಾಂ ಒಣ ಗಾಂಜಾವನ್ನು ಅಮಾನತುಪಡಿಸಿಕೊಳ್ಳಲಾಯಿತು.
ಎಸ್ಪಿ ಮಿಥುನ್ ಕುಮಾರ್ ಜಿ ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಹಾಗೂ ಕಾರಿಯಪ್ಪ ಎ ಜಿರವರ ಮಾರ್ಗದರ್ಶನದಲ್ಲಿ ಭದ್ರಾವತಿ ಡಿವೈಎಸ್ಪಿ ನಾಗರಾಜ್ ಸಿಪಿಐ ಶ್ರೀ ಶೈಲ ಕುಮಾರ್ ರವರ ಮೇಲ್ವಿಚಾರಣೆಯಲ್ಲಿ, ಹೊಸಮನೆ ಪಿಐ ಕೃಷ್ಣ ಕುಮಾರ್ ಬಿ ಮಾನೆ ಹಾಗೂ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.
ಆರೋಪಿತಳ ವಿರುದ್ಧ ಹೊಸಮನೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0072/2024 ಕಲಂ 20 (ಬಿ) ii (ಬಿ) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್