ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??


ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ.

ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ.

ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ

ಇನ್ನೂ ಸ್ಥಳೀಯರು ಈ ಬಗ್ಗೆ  ಅನುಮಾನ ವ್ಯಕ್ತಪಡಿಸಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಸ್ಟೇಷನ್‌ನಲ್ಲಿ ಈ ಸಂಬಂಧ ಫೋಷಕರು ದೂರು ದಾಖಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

5 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

11 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

2 days ago