ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News


ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ.

ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ ಅನುಷಾ ಪ್ರೇಮ ವಿವಾಹವಾಗಿರುವುದು ತಂದೆ ಮತ್ತು ತಾಯಿಯ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಗಳು ಜೀವಂತವಾಗಿರುವಾಗಲೇ ಮನೆಯ ಮುಂದೆ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಜನನ ಮತ್ತು ಮರಣದ ದಿನಾಂಕವನ್ನು ಬರೆಸಿ, ಫ್ಲೆಕ್ಸ್​ ಮುಂದೆ ಇಡೀ ಕುಟುಂಬ ಗೊಳೋ ಎಂದು ಅಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಇದಿಷ್ಟೇ ಅಲ್ಲದೆ, ಮಗಳಿಗೆ ಪಿಂಡ ಪ್ರದಾನ ಮಾಡಿರುವುದಾಗಿಯೂ ಸಂಬಂಧಿಕರಿಗೆ ತಿಳಿಸಿದ್ದಾರೆ. ಸದ್ಯ ಪಾಲಕರು ಕಣ್ಣೀರಿಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಮಗಳನ್ನು ಪ್ರೀತಿಯಿಂದ ಸಾಕಿದ ತಂದೆಗೆ ಇಂತಹ ಅನ್ಯಾಯ ಆಗಬಾರದಿತ್ತು. ಅವರ ಮನವೊಲಿಸಿ ಮದುವೆ ಮಾಡಿಕೊಳ್ಳಬೇಕಿತ್ತು. ಓಡಿ ಹೋಗುವ ಮೂಲಕ ತಂದೆ-ತಾಯಿಯ ತಲೆ ತಗ್ಗಿಸುವಂತೆ ಮಾಡಿದ ಮಗಳ ವಿರುದ್ಧ ಪಾಲಕರು ಪ್ರತಿಭಟಿಸಿದ ರೀತಿ ಸರಿಯಿದೆ ಎಂದು ನೆಟ್ಟಿಗರು ಕಾಮೆಂಟ್​ ಮೂಲಕ ಯುವತಿಯ ನಡೆಯನ್ನು ಟೀಕಿಸುತ್ತಿದ್ದಾರೆ.

ಅಂದಹಾಗೆ ಅನುಷಾ ತುಂಬಾ ದಿನಗಳಿಂದ ಪ್ರೀತಿ ಮಾಡುತ್ತಿದ್ದ ಯುವಕನ ಜತೆ ಇತ್ತೀಚೆಗಷ್ಟೇ ಓಡಿ ಹೋಗಿ ಮದುವೆಯಾಗಿದ್ದಾಳೆ. ಎಷ್ಟೇ ಹೇಳಿದರೂ ಕೇಳದೇ ಪ್ರಿಯಕರನ ಹಿಂದೆ ಹೋಗಿದ್ದು, ಈ ನೋವನ್ನು ಸಹಿಸಲಾರದೇ ತಂದೆ-ತಾಯಿ ಈ ರೀತಿಯಾಗಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಪಾಲಿಗೆ ಮಗಳು ಸತ್ತು ಹೋಗಿದ್ದಾಳೆ ಎಂದು ಭಾವಿಸಿ, ವಿಧಿವಿಧಾನ ಸಹ ನೆರವೇರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

19 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

20 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

21 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

2 days ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

2 days ago