Headlines

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !?


ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನ ವಿಚಾರಣೆ ನಡೆಸಿದ್ದ ಎನ್ಐಎ ತಂಡ ಈ ಹುಡುಗರ ಜೊತೆ ನಗರ ಘಟಕನ ಜೊತೆ ಸಂಪರ್ಕ ಇದ್ದ ಕಾರಣ ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ. 

About The Author

Leave a Reply

Your email address will not be published. Required fields are marked *