ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO
ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು ದೂರದ ಸಂಬಂಧಿಕರ ಮನೆಯಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ.
ನಂತರ ಬಾಲಕಿಯ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡು ಪೋಕ್ಸೋ ಕೇಸ್ ನಡಿ ಆರೋಪಿಯನ್ನು ಬಂಧಿಸಿದ್ದಾರೆ.