ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಗೆ ಕಂಟಕಪ್ರಾಯವಾಗಿರುವ ಕಟ್ಟಡ – ತೆರವುಗೊಳಿಸಲು ಮುಂದಾಗುತ್ತಾರ ಅಧಿಕಾರಿಗಳು – ಜನಹಿತಕ್ಕಾಗಿ | The building is a thorn in the development of Ripponpet town

ಜನಹಿತಕ್ಕಾಗಿ

ಯಾವುದೇ ಒಂದು ಗ್ರಾಮ, ನಗರದ ಅಭಿವೃದ್ಧಿಗೆ ಆ ಭಾಗವನ್ನು ಪ್ರತಿನಿಧಿಸುವ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು,ಅಧಿಕಾರಿ ಜೊತೆ ಗ್ರಾಮಸ್ಥರ ಸಹಕಾರ ಇದ್ದಾಗ ಮಾತ್ರ ನಿರೀಕ್ಷಿತ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯ­ವಾಗುತ್ತದೆ. ಅದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆ ಊರಿನ ಅಭಿವೃದ್ಧಿ ಕುಂಠಿತಕ್ಕೂ ಬೆರಳೆಣಿಕೆ ಗ್ರಾಮಸ್ಥರೇ ಕಾರಣರಾಗುತ್ತಾರೆ ಎನ್ನುವುದಕ್ಕೆ ನಮ್ಮ ಗ್ರಾಮ ನಿದರ್ಶನ’ ಎನ್ನುತ್ತಾರೆ ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿ ಪರ ಚಿಂತಕರು.


ಹೌದು ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ನಾಲ್ಕು ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ ಅನುಸರಿಸು­ತ್ತಿರುವ ಕಾರಣ ಎಂದೋ ಪೂರ್ಣ­ಗೊಳ್ಳ­ಬೇಕಿದ್ದ ರಸ್ತೆ ಕಾಮಗಾರಿ ಕುಂಠಿತಗೊಂಡಿದೆ.


ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿರುವ ಗಾಯತ್ರಿ ಚಂದ್ರಪ್ಪ ಎಂಬುವವರ ಮಾಲೀಕತ್ವದ ಗಣೇಶ್ ಸ್ಟೀಲ್ ಅಂಡ್ ಹೋಮ್ ಅಪ್ಲಾಯನ್ಸ್ ಅಂಗಡಿಯ ಕಟ್ಟಡ ರಸ್ತೆ ಕಾಮಗಾರಿಗೆ ಅಡ್ಡಲಾಗಿ ಇದ್ದರೂ ಅಧಿಕಾರಿಗಳ ಇಚ್ಚಾ ಶಕ್ತಿ ಕೊರತೆಯಿಂದ ಆ ಕಟ್ಟಡ ತೆರವುಗೊಳಿಸಲು ಯಾರು ಮುಂದಾಗದೇ ಇರುವುದು ವಿಪರ್ಯಾಸವಾಗಿದೆ ಈ ಬಗ್ಗೆ ಗ್ರಾಪಂ ಪಿಡಿಒ ರವರಿಗೆ ಮನವಿ ಸಲ್ಲಿಸಿದ್ದೇನೆ ಎನ್ನುತ್ತಾರೆ ಗ್ರಾಪಂ ಮಾಜಿ ಉಪಾಧ್ಯಕ್ಷ ರವೀಂದ್ರ ಕೆರೆಹಳ್ಳಿ.

ಈ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಕೇಳಿದರೆ ಆ ಕಟ್ಟಡದ ಮಾಲೀಕ ಕೋರ್ಟ್ ಮೊರೆ ಹೋಗಿದ್ದು ಕಟ್ಟಡಕ್ಕೆ ತಡೆಯಾಜ್ಞೆ ತಂದಿದ್ದಾರೆ ಎಂಬ ಸಬೂಬು ಹೇಳುತ್ತಾರೆ ಆದರೆ ಇಲ್ಲಿರುವ ಪ್ರಶ್ನೆ ಏನೇಂದರೇ ಕಳೆದ ಹತ್ತು ವರ್ಷಗಳ ಹಿಂದೇಯೇ ಚರಂಡಿ ನಿರ್ಮಾಣ ಸಮಯದಲ್ಲಿ ಕಟ್ಟಡದ ಮಾಲೀಕರು ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರೂ ಅಧಿಕಾರಿಗಳು ಯಾಕೆ ಇನ್ನೂ ನ್ಯಾಯಾಲಯದ ಮೂಲಕ ತಡೆಯಾಜ್ಞೆ ತೆರವಿಗೆ ಮುಂದಾಗಿಲ್ಲ ಎನ್ನುವುದೇ ಯಕ್ಷಪ್ರಶ್ನೆಯಾಗಿದೆ.!!

ಮೂಲಗಳ ಪ್ರಕಾರ ಗಾಯತ್ರಿ ಚಂದ್ರಪ್ಪ ಎಂಬುವವರಿಗೆ ಹಕ್ಕುಪತ್ರ ಮಂಜೂರಾಗಿರುವುದು 40×60 ಜಾಗಕ್ಕೆ ಮಾತ್ರ ಆದರೆ ಪ್ರಸಕ್ತ ಕಟ್ಟಡ ಇರುವುದು ಲೋಕೋಪಯೋಗಿ ಇಲಾಖೆಯ ಜಾಗವಾಗಿದ್ದು ಇದಕ್ಕೆ ಕೋರ್ಟ್ ಸ್ಟೇ ಅನ್ವಯಿಸುವುದಿಲ್ಲಾ ಅಷ್ಟೂ ಜ್ಞಾನವಿಲ್ಲದ ಅಧಿಕಾರಿಗಳು ಕಟ್ಟಡ ಮಾಲೀಕನ ಕುರುಡು ಕಾಂಚಾಣಕ್ಕೆ ಬಲಿಯಾಗಿದ್ದಾರೆ ಎನ್ನುತ್ತಾರೆ ಸ್ಥಳೀಯರು…


ಲೋಕೋಪಯೋಗಿ ಇಲಾಖೆಯವರು ಗ್ರಾಮ ಪಂಚಾಯತಿಯವರು ತೆರವುಗೊಳಿಸಿ ಕೊಡಲಿ ಎಂದು ಸಬೂಬು ಹೇಳುತಿದ್ದು ಈಗ ಬಂದಿರುವ ಮಾಹಿತಿ ಪ್ರಕಾರ ಸಾಗರ ರಸ್ತೆಯ ಕಾಮಗಾರಿಯನ್ನು ಮೈಸ್ ಕಂಪ್ಯೂಟರ್ ಸೆಂಟರ್ ವರೆಗೂ ಮಾತ್ರ ಮುಗಿಸಿ ತೀರ್ಥಹಳ್ಳಿ ರಸ್ತೆಯ ಕಾಮಗಾರಿ ಪ್ರಾರಂಭಿಸುತ್ತಾರೆ ಎನ್ನಲಾಗುತ್ತಿದೆ.

ಅಧಿಕಾರಿಗಳು ಅನಧಿಕೃತ ಕಟ್ಟಡದ ಮಾಲೀಕರ ಋಣ ಭಾರಕ್ಕೆ ವಿದ್ಯುತ್ ಲೈನ್ ನ್ನು ಅನಧಿಕೃತ ಕಟ್ಟಡಕ್ಕೆ ತೊಂದರೆಯಾಗದಂತೆ ಬೇರೆ ಕಡೆಯಿಂದ  ಸಂಪರ್ಕ ನೀಡಲು ದುಬಾರಿ ವೆಚ್ಚದ ಕಂಬ ಹಾಗೂ ಪರಿಕರಗಳನ್ನು ಈಗಾಗಲೇ ತರಿಸಿ ರಸ್ತೆಯ ಇಕ್ಕೆಲಗಳಲ್ಲಿರಿಸಿದ್ದು ನೋಡಿದರೆ ಅಧಿಕಾರಿಗಳು ಪಡೆದ ಲಂಚದ ಹಣದ ನೀಯತ್ತು ಎದ್ದು ಕಾಣುತ್ತಿದೆ.


ಪಟ್ಟಣದ ಅಭಿವೃದ್ಧಿ ಪರ ಚಿಂತಕರು ಈಗಾಗಲೇ ಈ ವಿಚಾರವನ್ನು  ಶಾಸಕ ಬೇಳೂರು ಗೋಪಾಲಕೃಷ್ಣ ಗಮನಕ್ಕೆ ತಂದಿದ್ದು ಶಾಸಕರು ಕೂಡಲೇ ಕಟ್ಟಡ ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಮಲ್ಲಿಕಾರ್ಜುನ್ ರವರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆಯಾಗಿ ಊರಿನ ಅಭಿವೃದ್ಧಿಗಾಗಿ ಶೇ .99% ರಷ್ಟು ಗ್ರಾಮಸ್ಥರು ಸಹಕಾರ ನೀಡಿ ಕೇವಲ ಬೆರಳೆಣಿಕೆ ವ್ಯಕ್ತಿಗಳು ಊರಿನ ಅಭಿವೃದ್ಧಿಗೆ ಅಡ್ದಗಾಲಾಗಿ ನಿಂತಿರುವುದು ಪಟ್ಟಣದ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು ಕೂಡಲೇ ಅಧಿಕಾರಿಗಳು ಕಟ್ಟಡ ತೆರವುಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಅನಧಿಕೃತ ಕಟ್ಟಡದ ಮುಂದೆ ಹೋರಾಟ ನಡೆಸಬೇಕಾಗುತ್ತದೆ ಎಂದು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಶ್ರೀಧರ್ ಚಿಗುರು ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರವನ್ನು ಶಾಸಕರ ಗಮನಕ್ಕೆ ತಂದಿದ್ದು ಲೋಕೋಪಯೋಗಿ ಇಲಾಖೆಯ ಅಭಿಯಂತರರೊಂದಿಗೆ ಚರ್ಚಿಸಿ ಕಟ್ಟಡ ತೆರವಿಗೆ ಕ್ರಮ ಕೈಗೊಳ್ಳಲಾಗುವುದು.

– ಧನಲಕ್ಷ್ಮಿ ಗಂಗಾಧರ್
ಅಧ್ಯಕ್ಷರು ಗ್ರಾಪಂ ರಿಪ್ಪನ್‌ಪೇಟೆ

ಪಟ್ಟಣದ ಅಭಿವೃದ್ಧಿಗಾಗಿ ಎಲ್ಲಾ ಕಟ್ಟಡದ ಮಾಲೀಕರು ತಾವೇ ಸ್ವತಃ ಕಟ್ಟಡ ತೆರವುಗೊಳಿಸಿರುವುದು ಸಂತಸದ ವಿಷಯ, ಊರಿನ ಅಭಿವೃದ್ಧಿ ದೃಷ್ಟಿಯಿಂದ ತಮ್ಮ ಕಟ್ಟಡವನ್ನು ತೆರವುಗೊಳಿಸಲು ಸಿದ್ದನಿದ್ದೇನೆ ಆದರೆ ಕಾನೂನು ಎಲ್ಲಾರಿಗೂ ಒಂದೇ ತರಹ ಇರಲಿ ಎನ್ನುವುದೇ ನಮ್ಮ ಆಶಯ..

– ಎಂ ಬಿ ಮಂಜುನಾಥ್
ಗಣೇಶ್ ಮೆಟಲ್ ಸ್ಟೋರ್ ಪಕ್ಕದ ಕಟ್ಟಡದ ಮಾಲೀಕರು


ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸಿದ ಹಾಗೇ ವಿದ್ಯುತ್ ಗುತ್ತಿಗೆದಾರ ಬೆಳ್ಳೂರು ನಾಗರಾಜ್ ರಸ್ತೆಗೆ ಅಡ್ಡಲಾಗಿ ನಾಲ್ಕು ಬೃಹತ್ ಕಂಬಗಳನ್ನು ತಂದು ಹಾಕಿದ್ದರಿಂದ ಈಗಾಗಲೇ ಹಲವಾರು ಅಪಘಾತಗಳು ನಡೆದು ಪಾದಚಾರಿಗಳು ಗಾಯ ಮಾಡಿಕೊಂಡಿದ್ದಾರೆ ಕೂಡಲೇ ಈ ಕಂಬಗಳನ್ನು ತೆರವುಗೊಳಿಸಬೇಕು

– ಶಿವಕುಮಾರ್ ಭಟ್
ಮಾಲೀಕರು ಸೂರಜ್ ಪೈಂಟ್ಸ್


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

5 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago