ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ

ರಿಪ್ಪನ್‌ಪೇಟೆ : ನಿರಂತರ ಪರಿಶ್ರಮ ಮತ್ತು ಗೆಲ್ಲಬೇಕೆನ್ನುವ ಛಲ ಇದ್ರೇ. ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಶ್ರಮವಷ್ಟೇ ಅಲ್ಲ ವಿದ್ಯಾರ್ಥಿಗಳ ಜೊತೆ ಪೋಷಕರ ಮತ್ತು ಶಿಕ್ಷಕರ ಶ್ರಮವೂ ಪ್ರಮುಖವಾಗಿರುತ್ತದೆ. ಕಾಲೇಜು ಪ್ರಾರಂಭವಾಗಿ 41 ವರ್ಷದಲ್ಲಿ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಕುರಿತ ಒಂದು ವರದಿ ಇಲ್ಲಿದೆ

ಕಾಲೇಜಿನ ಒಟ್ಟು ಫಲಿತಾಂಶ 97.78% ಆಗಿದ್ದು ಇದರಲ್ಲಿ ಕಲಾ ವಿಭಾಗ 98.57% ವಿಜ್ಞಾನ ವಿಭಾಗ ದಲ್ಲಿ 95.77%, ವಾಣಿಜ್ಯ ವಿಭಾಗ 98.82% ಫಲಿತಾಂಶ ಬಂದಿದೆ.ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಭೂಮಿಕಾ ವಿಜ್ಞಾನ ವಿಭಾಗದಲ್ಲಿ 559 ಅಂಕ ಪಡೆದರೆ ,ವಾಣಿಜ್ಯ ವಿಭಾಗದಲ್ಲಿ ಇಂಚರ  577,ಹಾಗೂ ಕಲಾ ವಿಭಾಗದಲ್ಲಿ ತುಳಸಿ 578 ಅಂಕ ಪಡೆದಿರುತ್ತಾರೆ.


ರಿಪ್ಪನ್‌ಪೇಟೆ ಕಾಲೇಜಿನ ಇತಿಹಾಸದಲ್ಲಿಯೇ ಈ ಬಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ದಾಖಲೆ ಬರೆದಿದ್ದಾರೆ.1983 ರಲ್ಲಿ ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಆರಂಭವಾದ ಪಿಯೂ ಕಾಲೇಜು ಇದೇ ಪ್ರಥಮ ಬಾರಿಗೆ ದಾಖಲೆ ಫಲಿತಾಂಶ ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ಮಿಂಚ ತೊಡಗಿದೆ.

ಇನ್ನೂ ಈ ಕಾಲೇಜಿನಲ್ಲಿ ವ್ಯಾಸಂಗ ಮಾಡೋ ಬಹುತೇಕ ವಿದ್ಯಾರ್ಥಿಗಳು ಬಡ ಮತ್ತು ಮದ್ಯಮ ವರ್ಗದವ ರಾಗಿದ್ದು, ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂತಾದ್ಧಾಗಿದೆ.ಅದೇನೆ ಇರಲಿ ಸಾಧಿಸಬೇಕೆನ್ನುವ ಛಲ ಇದ್ರೇ ಏನನ್ನಾದ್ರೂ ಮಾಡಬಹುದು ಅನ್ನೋದಕ್ಕೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ.

ಕಳೆದ ವರ್ಷ ಕಾಲೇಜು ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ಶಾಸಕ ಬೇಳೂರು ಗೋಪಾಲಕೃಷ್ಣ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ನೀಡಿ ಕಾಲೇಜಿನ ಅಭಿವೃದ್ಧಿಯ ಚಿಂತೆ ನನಗೆ ಬಿಡಿ ಎಂಬ ಪ್ರೋತ್ಸಾಹದ ನುಡಿಯನ್ನಾಡಿ ಹತ್ತಾರು ವರ್ಷಗಳಿಂದ ಸುಣ್ಣ ಬಣ್ಣ ಕಾಣದ ಕಾಲೇಜಿಗೆ ರಂಗುರಂಗಿನ ಮೆರುಗು ನೀಡಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳಿಗೆ ನವಚೈತನ್ಯ ನೀಡಿದ್ದರು.
ನೂತನ ಕಾಲೇಜು ಅಭಿವೃದ್ಧಿ ಸಮಿತಿ ,ಪ್ರಾಂಶುಪಾಲದ ಮಂಜುನಾಥ್ ಎ ಹಾಗೂ ಉಪನ್ಯಾಸಕರುಗಳ ವಿಶೇಷ ಆಸಕ್ತಿ ಹಾಗೂ ಶೈಕ್ಷಣಿಕ ಕಾಳಜಿಯು ದಾಖಲೆ ಮಟ್ಟದ ಫಲಿತಾಂಶಕ್ಕೆ ಕಾರಣವಾಗಿದೆ ಎಂದು ಪೋಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…

4 hours ago

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

5 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

5 hours ago

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

1 day ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 day ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago