w
Headlines
Home » ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್

ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.


ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ- ರಿಪ್ಪನಪೇಟೆ ಬ್ಲಾಕ್ ಕಾಂಗ್ರೆಸ್ ಘಟಕ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಸಮಸ್ಯೆಗಳನ್ನು ಹೇಳಿಕೊಂಡು ಕಚೇರಿಗೆ ಬಂದ ಅಶಕ್ತರು, ಶೋಷಿತ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲಿ ಪಕ್ಷ ಚಟುವಟಿಕೆಗಳಿಗೆ ಮಾತ್ರ ಹೆಚ್ಚು ಒತ್ತು ನೀಡದೆ, ಸಾರ್ವಜನಿಕ ಸಮಸ್ಯೆಗಳ ಪರಿಹರಿಸುವ ಬಗ್ಗೆಯೂ ಆಸಕ್ತಿ ತೋರಬೇಕು,ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಯೋಜನೆಗಳ ಬಗ್ಗೆ ಮನವರಿಕೆ ಮಾಡಬೇಕು ಎಂದರು.


ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಗೆಲುವಿಗೆ ಎಲ್ಲರೂ ಕೂಡಿ ಒಗ್ಗಟ್ಟಿನ ಬಲ ಪ್ರದರ್ಶಿಸಬೇಕಿದೆ,ರಾಜಕೀಯದಲ್ಲಿ ದ್ವೇಷ- ಅಸೂಯೆ, ಮನಸ್ಥಾಪಗಳು ಸಹಜ. ಆದರೆ, ಇದನ್ನು ಬದಿಗೆ ಸರಿಸಿ, ಗೀತಾ ಅವರ ಗೆಲುವಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಶ್ವೇತ ಬಂಡಿ, ಅನಿತಾ ಕುಮಾರಿ, ಬಂಡಿ ರಾಮಚಂದ್ರಪ್ಪ, ಬಿ.ಪಿ.ರಾಮಚಂದ್ರಪ್ಪ, ಸಾಕಮ್ಮ, ಧನಲಕ್ಷ್ಮೀ, ಸುಮಾ ಸುಬ್ರಹ್ಮಣ್ಯ, ವೈ.ಚ್.ನಾಗರಾಜ ಇದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.