ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಂಪೆರೆದ ವರ್ಷದ ಮೊದಲ ವರ್ಷಧಾರೆ |The first rain fell

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು.


ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು.

ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ ಮನಗಳಿಗೆ ಹಾಗೂ ಜೀವಸಂಕುಲಕ್ಕೆ ತಂಪೇರದಂತಾಗಿದೆ.


ಕಳೆದ 7 ತಿಂಗಳಿನಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಸಹ ತೊಂದರೆಯಾಗುವ ಸಂಭವವಿತ್ತು. ಇಂದು ಸುರಿದ ಮಳೆಯಿಂದ ಅದರಲ್ಲೂ ವಿಶೇಷವಾಗಿ ಪ್ರಾಣಿ ಸಂಕುಲಕ್ಕೆ ಮತ್ತು ಸಸ್ಯ ಜೀವಿಗಳಿಗೆ  ಸ್ವಲ್ಪಮಟ್ಟಿಗಾದರೂ ನೀರಿನ ಜೊತೆಗೆ  ತಂಪಿನ ವಾತಾವರಣ ದೊರೆತಂತಾಗಿದೆ.

ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ ಅಲ್ಲಲ್ಲಿ ಕಂಡುಬಂತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…

4 hours ago

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

5 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

5 hours ago

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

1 day ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 day ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago