ಲಕ್ಷ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ | KSE

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ


ರಿಪ್ಪನ್‌ಪೇಟೆ;-ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ನನ್ನ ಪರವಾಗಿ ಹೋದ ಕಡೆಯಲ್ಲಿಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಮತದಾರ ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಭಾರಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎಂದು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳುವುದರೊಂದಿಗೆ ಎರಡನೇ ಸ್ಥಾನಕ್ಕೆ ಬಿಜೆಪಿ ಕಾಂಗ್ರೆಸ್  ಪೈಪೋಟಿ ನಡೆಸುತ್ತಿದ್ದಾರೆಂದರು.

ರಿಪ್ಪನ್‌ಪೇಟೆಯ ರಾಯಲ್ ಕರ್ಫಂಟ್‌ನ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಶಿಕಾರಿಪುರ ಹಿತ್ಲ ಕಲ್ಮನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಮತದಾರರು ಸಭೆಯಲ್ಲಿ ಭಾಗವಹಿಸಿರುವುದನ್ನು ನೋಡಿದರೆ ನನ್ನ 35 ವರ್ಷದ ರಾಜಕೀಯ ಜೀವನದಲ್ಲಿಯೂ ಇಷ್ಟು ಬೆಂಬಲ ಸಿಕ್ಕಿರುವುದನ್ನು ಕಂಡಿರುವುದೇ ಇದು ಮೊದಲಾಗಿದೆ.

ಶಿಕಾರಿಪುರದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಗ ಸಂಸದ ರಾಘವೇಂದ್ರ ಹಾಗೂ ವಿಜೇಂದ್ರರವರ ಮೇಲೆ ಮತದಾರರು ತೀವ್ರ ಆಸಮದಾನ ಹೊಂದಿದ್ದಾರೆ. ರಾಷ್ಟ್ರ ಭಕ್ತ ಅಭಿಮಾನಿಗಳು ನಮ್ಮ  ಮನೆಗೂ ಬರಬೇಡಿ ಕಾರಣ ನಾಳೆ ನಮ್ಮ ವಿರುದ್ದ  ಅಪ್ಪ ಮಕ್ಕಳು ತೊಂದರೆ ಕೊಡುತ್ತಾರೆ ಎಂದು ಭಯ ಪಡುತ್ತಿದ್ದಾರೆ.ಏನೇ ಅಗಲಿ ನಿಮ್ಮಂತಹ  ನೇರ ದಿಟ್ಟ ಹೋರಾಟಗಾರ ನಾಯಕರ ಅಗತ್ಯವಿದೆ ಎಂದು ಹೇಳಿ ನಮ್ಮ ಬೆಂಬಲ ನಿಮಗೆ ಎಂದು ಹೇಳುತ್ತಿದ್ದಾರೆಂದರು.

ನಾನು ಪಕ್ಷೇತರನಾಗಿ ಗೆದ್ದರೂ ಕೂಡಾ ಮೋದಿಜಿಗೆ ಲೋಕಸಭೆಯಲ್ಲಿ ಬಿಜೆಪಿಗೆ ಬೆಂಬಲಿಸುತ್ತೇನೆ ಯಾವುದೇ ಕಾರಣಕ್ಕೂ ಹಿಂದೂ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೇರುವ ಪ್ರಶ್ನೆಯೇ ಇಲ್ಲ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆಯಿಲ್ಲದಂತಾಗಿದೆ ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ ಒಂದೊಂದು ತರಹದ ಗೊಂದಲದ ಹೇಳಕೆ ನೀಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿ ಇನ್ನೂ ಹೀಗೆ ಮುಂದುವರಿದರೆ ಕರ್ನಾಟಕ ರಾಜ್ಯ ಮುಸ್ಲಿಂ ರಾಜ್ಯವಾಗುವುದಲ್ಲಿ ಯಾವುದೇ ಸಂದೇಹವಿಲ್ಲ ಎಂದ ಅವರು ನನ್ನ ಉಸಿರಿರುವವರೆಗೂ ನಾನು ಹಿಂದು ಪರವಾಗಿಯೇ ಹೋರಾಟ ಮಾಡುವುದರೊಂದಿಗೆ ಹಿಂದು ರಕ್ಷಣೆಯಲ್ಲಿ ತೊಡಗಿಕೊಂಡಿರುತ್ತೇನೆಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ;-

ರಾಜ್ಯದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ.

ಆಡಳಿತ ವ್ಯವಸ್ಥೆಯಲ್ಲಿ ಹಿಡಿತವಿಲ್ಲದೆ ನಿತ್ಯ ಒಂದಲ್ಲ ಒಂದು ಗೊಂದಲದ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಬಿಜೆಪಿ ಶುದ್ದಿಕರಣಕ್ಕಾಗಿ ಪಕ್ಷೇತರನಾಗಿ ಸ್ಪರ್ಧೆ;

ರಾಜ್ಯದಲ್ಲಿ ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಸಿಕ್ಕು ನಿಷ್ಟಾವಂತರಾದ ಸದಾನಂದಗೌಡ,ಪ್ರತಾಪಸಿAಹ,ಬಸವನಗೌಡ ಪಾಟೀಲ್ ಯತ್ನಾಳ್,ನಳಿಕುಮಾರ್ ಕಟೀಲ್,ಸಿ.ಟಿ.ರವಿ ಹೀಗೆ ಹಲವರು ಬಿಜೆಪಿಯ ಕಟ್ಟಾಳುಗಳಾಗಿದ್ದವರು ಅವರನ್ನು ದೂರವಿರಿಸುವ ಉದ್ದೇಶದಿಂದಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡು ಜಿಲ್ಲೆಯಲ್ಲಿ ತನ್ನ ಮಗನ ವಿರುದ್ದ ವೀಕ್  ಆಭ್ಯರ್ಥಿಯನ್ನು ನಿಲ್ಲಿಸಿಕೊಂಡಿದ್ದಾರೆಂದು ಹೇಳಿ ಯಾವುದೇ ಕಾರಣದಿಂದಲೂ ನಾನು ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಶುದ್ದಿಕರಣ ಮಾಡುವು ಉದ್ದೇಶದಿಂದಲೇ  ಸಿದ್ದಾಂತವನ್ನು ಇಟ್ಟುಕೊಂಡು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಯಾರ ಬಗ್ಗೆಯೂ ವೈಯಕ್ತಿಕ ಟೀಕೆ ಮಾಡುತ್ತಿಲ್ಲ ನನ್ನ ಗುರಿ ಮೋದಿಯವರನ್ನು ಮೊತ್ತೊಮ್ಮೆ ದೇಶದಲ್ಲಿ ಪ್ರಧಾನಿಯನ್ನಾಗಿ ಮಾಡುವುದೆಯಾಗಿದೆ ಎಂದರು.

ಈ ಸಭೆಯಲ್ಲಿ ವಾಟ್‌ಗೋಡು ಸುರೇಶ್,ತ ಮ.ನರಸಿಂಹ, ವಿಶಾಲ,ಜಯ ಸುಬ್ಬರಾವ್,ಲೀಲಾವತಿ,ನಿರೂಫ್ ಕುಮಾರ್,ಇನ್ನಿತರರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

38 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago