ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ..?? ಈ ಸುದ್ದಿ ನೋಡಿ
ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.
# ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ,
# ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್,
# ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು,
# ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ
# ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ,
# ಯಂಗ್ಸ್ಟರ್ ಎಂಪರ್ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್,
ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್