ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ
ಶಿವಮೊಗ್ಗ : ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.
ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವದ ಅನುಯಾಯಿ, ಸಾಮಾಜಿಕ ಕಳಕಳಿಯ ಚಿಂತಕ, ಮರಾಠ ಸಮುದಾಯದ ಏಕೈಕ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಅಸಂಬದ್ಧ ಪದಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕೆ ಮಾಡಿದ್ದಾರೆ. ಕೂಡಲೇ ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ಛತ್ರಪತಿ ಶಿವಾಜಿ ಮರಾಠ ಸಮಾಜ ಹಾಗೂ ಅಹಿಂದ ಪ್ರಮುಖ ಮುಖಂಡರು ಮತ್ತು ಛತ್ರಪತಿ ಶಿವಾಜಿ ಯುವ ವೇದಿಕೆ ನೇತೃತ್ವದಲ್ಲಿ ಬೃಹತ್ ಪಂಜಿನ ಪ್ರತಿಭಟನೆ ನಡೆಸಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್