Headlines

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ 


ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ.


ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ.

ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ.


ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು ಪಲ್ಟಿಯಾಗಿ ಉರುಳಿ ಬಿದ್ದಿದೆ.

ತೀರ್ಥಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸುತಿದ್ದಾರೆ.

Leave a Reply

Your email address will not be published. Required fields are marked *