Headlines

Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಜೀಪ್ – ಚಾಲಕ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು


ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ.

9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ.


ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು.ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.


ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version