Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು
ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ.
9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ.
ಘಟನೆಯಲ್ಲಿ ರಿಪ್ಪನ್ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು.ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಮೃತದೇಹವನ್ನು ರಿಪ್ಪನ್ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್