Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !
ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ.
ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ಸಾವಿಗೀಡಾಗಿದ್ದ ಅಜ್ಜಿಯೊಬ್ಬರ ಅಂತಿಮ ದರ್ಶನ ಮಾಡಲು ಬೆಂಗಳೂರಿಂದ ಬೈಕಿನಲ್ಲಿಚಿತ್ರದುರ್ಗ ಮಾರ್ಗವಾಗಿ ಬರುತ್ತಿದ್ದ ವೇಳೆ ಲಾರಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಒಂದು ಅಡ್ಡ ಬಂದಿದೆ. ಆ ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿ ಮೃತ ಪಟ್ಟು ಮತ್ತೊರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್