Categories: Blog

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

ಬಂಕಾಪುರ : ಭಕ್ತಿಯಿಂದ ಬರುವ ಭಕ್ತರ ಕಷ್ಟವನ್ನು ಕಳೆದು, ಇಷ್ಟಾರ್ಥಗಳನ್ನು ಈಡೇರಿಸುವ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.


ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ಶ್ರೀ ಸಿದ್ದಯ್ಯಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು.

ತನ್ನ ಮಹಾ ಮಹಿಮೆಯಿಂದ ಜನರ ಮನದಲ್ಲಿ ಮನೆ ಮಾಡಿರುವ ಶ್ರೀ ಬೀರಲಿಂಗೇಶ್ವರನ ಪೌರಾಣಿಕ ಕಥೆಯಿದೆ. ಪೀಡೆ, ಪಿಶಾಚಿ, ದೆವ್ವ ಹೀಗೆ ಹಲವು ರೀತಿಯ ಸಂಕಷ್ಟ ಎದುರಿಸುವ ಭಕ್ತರಿಗೆ ಇಂದಿಗೂ ಬೀರಲಿಂಗೇಶ್ವರನ ಆಶೀರ್ವಾದವೇ ದಿವ್ಯ ಔಷಧಿಯಾಗಿದೆ. ಸಂಕಷ್ಟ ಬಂದಾಗ ಬಂಕಾಪುರ ಸೇರಿದಂತೆ ಹಾವೇರಿ, ಧಾರವಾಡ, ಕೊಪ್ಪಳ ಇತರೆ ಜಿಲ್ಲೆಗಳಿಂದ ಭಕ್ತರು ಬಂದು ಬೀರಲಿಂಗೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಿ ಇಷ್ಟಾರ್ಥಗಳ ಫಲ ಪಡೆದುಕೊಳ್ಳುತ್ತಿದ್ದಾರೆ.

ವೀಡಿಯೋ ಇಲ್ಲಿ ವೀಕ್ಷಿಸಿ👇👇


ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿಯ ಹಬ್ಬದ ಪುಣ್ಯ ದಿನದಂದು ಶ್ರೀ ಬೀರೇಶ್ವರ ದೇವರನ್ನು ಮೆರವಣಿಗೆಯ ಮೂಲಕ ಹೊಳೆ ಪೂಜೆಗೆ  ಹೋಗುತ್ತಾರೆ. ಪವಾಡ ಸಿದ್ದಿ ಪುರುಷ ಎನಿಸಿಕೊಂಡ ಹಾಲುಮತ ಸಮಾಜದ ಶ್ರೀ ಬೀರೇಶ್ವರ ಸ್ವಾಮಿಯು ನಂಬಿದ ಜನರಿಗೆ ವರವನ್ನು ಕೊಡುತ್ತಾನೆ.ಎಂದು ನಂಬಿಕೆ ಇಟ್ಟುಕೊಂಡು ಬಂದ ಜನರು,ಜೋಗಮ್ಮರು , ಗೊರವಯ್ಯನವರು  ದೇವರ ನಾಮಗಳನ್ನು ನುಡಿಯುತ್ತಾ. ದೇವರಿಗೆ ಬಂದಂತ ಭಕ್ತರು ತಮ್ಮ ಹರಕೆ ಕೈಗೂಡಿದ ನಂತರ ಶಿರಸಾಷ್ಟಾಂಗ ನಮಸ್ಕಾರ ಮತ್ತು ಉರುಳು ಸೇವೆ, ಭಕ್ತರು ಬೇಡಿಕೊಂಡಂತೆ ಸೇವೆಯನ್ನ ಪಲ್ಲಕ್ಕಿಯ ಸುತ್ತ  ಸೇವೆ ಸಲ್ಲಿಸುತ್ತಾ.  ಅಂಕದಕಣದ ಓಣಿಯ ಪ್ರಮುಖ ಬೀದಿಯಲ್ಲಿ ಶ್ರೀ ಬೀರೇಶ್ವರ ಸ್ವಾಮಿಯ ಪಲ್ಲಕ್ಕಿ ಮೆರವಣಿಗೆ ಸಾಗಿತು.


ಶ್ರೀ ರೇವಣಸಿದ್ದೇಶ್ವರ ಯುವಕ ಮಂಡಲ ಸಂಘದವರು, ಶ್ರೀ ಬೀರೇಶ್ವರ ಸೇವಾ ಸಮಿತಿಯವರು  ಮತ್ತು ಸಮಾಜದ ಗುರುಹಿರಿಯರು ಸೇರಿಕೊಂಡು ದೇವರ ಪಲ್ಲಕ್ಕಿಯನ್ನು ಗರ್ಭಗುಡಿ ಸೇರಿಸಿದರು.

ದರ್ಶನಕ್ಕೆ ಆಗಮಿಸಿದ್ದ ಭಕ್ತಾದಿಗಳೆಲ್ಲರೂ ಹಣ್ಣು ಕಾಯಿ, ಜೋಳದ ಹಿಟ್ಟಿನ ತಣ್ಣಅಂಬಲಿ ನೈವೇದ್ಯವನ್ನು ಮಾಡಿಕೊಂಡು ಮನಶಾಂತಿಯನ್ನು ಪಡೆದರು.

ವರದಿ – ನಿಂಗರಾಜ ಕೂಡಲ ಬಂಕಾಪುರ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago