Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ.

ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ  ನೀರು ಹರಿದು ಬಂದು ಹಲವಾರು ಪ್ರಮಾಣದ ವಸ್ತುಗಳು ನಾಶವಾಗಿದ್ದು ಅಂಗಡಿ ಮಳಿಗೆಗಳ ಮಾಲೀಕರು ಎಲ್ಲರೂ ಸೇರಿಕೊಂಡು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ .

ಈ ಮಾರ್ಗಗಳಲ್ಲಿ ವಾಹನಗಳು ಬಂದಾಗ ತಗ್ಗುನಲ್ಲಿ ನಿಂತಿದ್ದ ನೀರು ದಾರಿ ಹೋಗುವರ ಮೇಲೆ ಸಿಡಿಯುತ್ತಿದ್ದು ಅವರ ಬಟ್ಟೆಗಳು ಹೊಲಸಾಗುತ್ತಿವೆ. ಈ ರಸ್ತೆಯಲ್ಲಿ ನಾಜುಕಿನಿಂದ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನಗಳು ಬಂದರೆ ದೂರು ಸರಿದು ನಿಲ್ಲುವಂತಾಗಿದೆ.

ಪುರಸಭೆ, ಜಿಪಂ ಮತ್ತು ಲೋಕೋಪಯೋಗಿ ಇಲಾಖೆಗಳಿಗೆ ಈ ರಸ್ತೆಗಳು ಒಳಪಡುತ್ತವೆ. ಒಳ ಚರಂಡಿ ಯೋಜನೆ ಕಾಮಗಾರಿ ಈ ರಸ್ತೆಗಳನ್ನು ಇನ್ನಷ್ಟು ಹದಗೆಡಿಸಿದೆ. ಮಳೆ ಬಂದರೆ ಸಾಕು ಚರಂಡಿಗಳು ತುಂಬಿ ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತದೆ. ಆಗಂತೂ ಪರಿಸ್ಥಿತಿ ಹೇಳತೀರದು ಮತ್ತು ಮೂಗು ಮುಚ್ಚಿಕೊಂಡೆ ಇಲ್ಲಿ ತಿರುಗಾಡಬೇಕು ಇದು ಅನಿವಾರ್ಯ.

ಇಲ್ಲಿ ವ್ಯವಹಾರ ಮಾಡುವ ಅಂಗಡಿ ಕಾರರೆಲ್ಲ ಸೇರಿಕೊಂಡು  ಪುರಸಭೆಗೆ ಮನವಿ ಸಲ್ಲಿಸಿದರು ಸಹ  ಪುರಸಭೆಯ ಗಮನವಹಿಸದೆ  ನಿರ್ಲಕ್ಷೆಯಿಂದ, ದುರಾಡಳಿತದಿಂದ ಸಾಗುತ್ತಿದೆ.  ಅಧಿಕಾರಿಗಳು ಕೈ ಕಟ್ಟಿ ಕುಳಿತುಕೊಂಡಿದ್ದಾರೆ.

ಈ ರಸ್ತೆಗಳಲ್ಲಿರುವ ತಗ್ಗು ಗುಂಡಿಗಳನ್ನು ಮುಚ್ಚಬೇಕು. ನಲ್ಲಿ ನೀರು ರಸ್ತೆಗೆ ಹರಿ ಬೀಡದಂತೆ ನಾಗರಿಕರಿಗೆ ಸೂಚಿಸಬೇಕು. ಚರಂಡಿಗಳನ್ನು ಮೇಲಿಂದ ಮೇಲೆ ಸ್ವಚ್ಛಗೊಳಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಸುರಿದ ಭಾರಿ ಮಳೆಯಿಂದ ಗಟಾರಗಳು ತುಂಬಿ ಮಲೀನಗೊಂಡ ನೀರು ರಸ್ತೆಗೆ ಹರೆಯುತ್ತಿದೆ.  ಪುರಸಭೆ ನಿರ್ಲಕ್ಷೆಯಿಂದ ನಮಗೆಲ್ಲರಿಗೂ ತೊಂದರೆ ಆಗುತ್ತಿದೆ. ಸಾರ್ವಜನಿಕರು ಓಡಾಡಲು ತೊಂದರೆಯಾಗುತ್ತಿದೆ. ವ್ಯವಹಾರ ಮಾಡುವ ತಾಣವಾದ ಈ ಬಂಕಾಪುರದಲ್ಲಿ ಸುತ್ತಮುತ್ತ ಹಳ್ಳಿಯ ಜನರಲ್ಲಿ ಸೇರುವ ಸ್ಥಳವಾಗಿದೆ.

ಬಂಕಾಪುರದಲ್ಲಿ ಅಧಿಕಾರಿಗಳು ನಿರ್ಲಕ್ಷಯಿಂದ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದನ್ನು ನಮ್ಮ ಅಳಲು ಕೇಳುವವರ್ಯಾರು.  ಪುರಸಭೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಬಂದಿಲ್ಲ.

ಶ್ರೀಪಾದ್ ಸಂಕಣ್ಣವರ್ 

ಮಾಲೀಕರು ಚಿದಂಬರ್ ಮೆಡಿಕಲ್

 ವರದಿ: ನಿಂಗರಾಜ್ ಕೂಡಲ್ ,ಹಾವೇರಿ ಜಿಲ್ಲೆ ( ಬಂಕಾಪುರ).

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

39 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago