Hombuja | ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ತ್ರಿಕೂಟ ಜಿನಾಲಯದ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ-ಸಂಘ ಪೂಜೆ

‘ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ’ –
ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ


ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ತ್ರಿಕೂಟ ಜಿನಮಂದಿರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ಶಾಂತಿನಾಥ ಸ್ವಾಮಿ, ಶ್ರೀ ಬಾಹುಬಲಿ ಸ್ವಾಮಿ ಏಕಶಿಲಾ ವಿಗ್ರಹಗಳಿಗೆ 108 ಕಲಶಗಳ ಮಹಾಭೀಷೇಕವನ್ನು ವಾರ್ಷಿಕ ರಥೋತ್ಸವದ ಐದನೇಯ ದಿನಂದು ಭಕ್ತಾಧಿಗಳು ನೆರವೇರಿಸಿದರು.

ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಕಂಬದಹಳ್ಳಿ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ಉಪಸ್ಥಿತಿಯಲ್ಲಿ ನಿತ್ಯವಿಧಿ ಸಹಿತ, ಗುಡ್ಡದ ಬಸದಿ (ತ್ರಿಕೂಟ ಜಿನಾಲಯ) ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಆಗಮೋಕ್ತ ಶಾಸ್ತçದನ್ವಯ ಮಹಾಭೀಷೇಕ ಮಾಡಲಾಯಿತು. ಶ್ರೀ ಧರಣೇಂದ್ರ ಯಕ್ಷ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂಜಾ ವಿಧಿ ನಡೆಯಿತು.

ಶ್ರೀ ಪಾರ್ಶ್ವನಾಥ ಸ್ವಾಮಿಯ ಅನುಗ್ರಹದಿಂದ ಸದಾ ಭಕ್ತರಿಗೆ ವಿಘ್ನ-ಸಂಕಷ್ಟಗಳು ದೂರವಾಗಲಿ ಮತ್ತು ಜೀವನದಲ್ಲಿ ಜಿನಧರ್ಮ ಪಥವು ಆರೋಗ್ಯದಾಯಕವಾಗಿರಲಿ ಎಂದು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು.

ಸೇವಾಕರ್ತರಾದ ಬೆಂಗಳೂರಿನ ಶ್ರೀಮತಿ ರೂಪಲ್ ಜೈನ್, ಶ್ರೀ ರಜನೀಶ್ ಜೈನ್ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡರು. ಹುಬ್ಬಳ್ಳಿ, ಕೊಪ್ಪಳ, ಶಿವಮೊಗ್ಗ, ಬೆಳಗಾವಿ, ವಿಜಯಪುರ, ವಯನಾಡ್, ಮಂಗಳೂರು-ಉಡುಪಿ ಜಿಲ್ಲಾ ಜೈನ ಸಮಾಜದವರು ಭಾಗಿಗಳಾದರು.

ಮಹಾರಥೋತ್ಸವದಂದು ಸಂಜೆ 09 ಕ್ಕೆ ಯಕ್ಷಗಾನ ತಾಳಮದ್ದಳೆ ‘ಯಶೋಧರ ಚರಿತ್ರೆ-ಪದ್ಮಾವತಿ ಮಹಾತ್ಮೆ’ ಪ್ರಸಂಗವನ್ನು ಹೆಬ್ರಿಯ ಚಾರದ ಶ್ರೀ ಮಹಿಷಮರ್ಧಿನಿ ಯಕ್ಷ ಕಲಾ ಪ್ರತಿಷ್ಠಾನದ ಕಲಾವಿದರು ಪ್ರಸ್ತುತ ಪಡಿಸಿದರು.
(ಪೋಟೋ ಇದೆ)
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 hour ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

24 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago