Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ
ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ ಅನುತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದು, ಕಲಾ ವಿಭಾಗದಲ್ಲಿ 148 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 132 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 144 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 141 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 84 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 81 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಫಲಿತಾಂಶದಲ್ಲಿ 51 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು 251 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.
ವಿಜ್ಞಾನ ವಿಭಾಗದಲ್ಲಿ ಧನುಶಾ 562, ವಾಣಿಜ್ಯ ವಿಭಾಗದಲ್ಲಿ ಸಂಜಯ 580, ಕಲಾ ವಿಭಾಗದಲ್ಲಿ ಮಿಥುನ್ 578 ಅತಿ ಹೆಚ್ಚು ಅಂಕ ಗಳಿಸಿದ್ದಾರೆಂದರು.
ಅಭಿನಂದನೆ:
ಶೇ.94.14 ಬರಲು ಕಾರಣರಾದ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಸ್ವಾಮಿರಾವ್ ಹಾಗೂ ಉಪನ್ಯಾಸಕ ವರ್ಗ ಸಹಕರಿಸಿದ ಪೋಷಕ ವರ್ಗ ಗೌರವ ಉಪನ್ಯಾಸಕ ವರ್ಗದವರನ್ನು ಹೊಸನಗರ ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಸದಾಶಿವ ಶ್ರೇಷ್ಠಿ, ವಕೀಲ ಗಗ್ಗ ಬಸವರಾಜ್ ಇನ್ನೂ ಮುಂತಾದವರು ಅಭಿನಂದಿಸಿ ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ಫಲಿತಾಶಕ್ಕೆ ಒತ್ತು ನೀಡಬೇಕೆಂದಿದ್ದಾರೆ.