Hosanagara | ಕೈ ತೊರೆದು ಕಮಲ ಹಿಡಿದ ತಾಪಂ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್
ಹೊಸನಗರ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ಹಾಲಗದ್ದೆ ಉಮೇಶ್ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಸುಮಾರು ಹತ್ತು ವರ್ಷಗಳಿಂದ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಛಾಪು ಮೂಡಿಸಿಕೊಂಡು ಪಟ್ಟಣ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣ ಪಂಚಾಯತಿ ಹಾಲಿ ಸದಸ್ಯ, ಒಕ್ಕಲಿಗೆ ಸಂಘದ ನಿರ್ದೇಶಕ ಹಾಲಗದ್ದೆ ಉಮೇಶ್ ಕಾಂಗ್ರೆಸ್ ಪಕ್ಷ ತೊರೆದು ಶಿಕಾರಿಪುರದ ಯಡಿಯೂರಪ್ಪ ನಿವಾಸದಲ್ಲಿ ಅವರ ಸಮ್ಮುಖದಲ್ಲಿ ನೂರಾರು ಜನ ಅಭಿಮಾನಿಗಳೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಹಕ್ರೆ ಮಲ್ಲಿಕಾರ್ಜುನ್, ಸುರೇಶ್ ಬಿ.ಸ್ವಾಮಿರಾವ್, ಎಂ.ಬಿ.ಚನ್ನವೀರಪ್ಪ, ಶರಧಿ ಪೂರ್ಣೇಶ್, ಚಂದ್ರವಳ್ಳಿ ಸೋಮಶೇಖರ್ ಉಪಸ್ಥಿತರಿದ್ದರು.