NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು

ಚುನಾವಣೆ ಹತ್ತಿರವಾಗುತ್ತಲೇ ರಾಜಕೀಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಮಾದ್ಯಮಗಳಲ್ಲಿ ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್​.ಎಸ್ ಚುನಾವಣಾಧಿಕಾರಿಗಳಿಗೆ​ ದೂರು ನೀಡಿದ್ದಾರೆ.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ ದಾಳಿಗಳಲ್ಲಿ  ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಸದಸ್ಯರನ್ನು ಬಂಧಿಸಲಾಗಿದೆ ಎಂಬ ನಿಮ್ಮ ಹೇಳಿಕೆಯನ್ನು ಖಾಸಗಿ ಸುದ್ದಿ ವಾಹಿನಿಯಲ್ಲಿ ಏ.5 ರಂದು ಮಧ್ಯಾಹ್ನ 1.17 ಗಂಟೆಗೆ ಪ್ರಸಾರ ಮಾಡಲಾಗಿದೆ. ಈ ಕುರಿತು ನೀಡಿರುವ ಹೇಳಿಕೆಯನ್ನು ದೂರಿನಲ್ಲಿ ಲಗತ್ತಿಸಲಾಗಿದೆ.


ಜೊತೆಗೆ ಈ ನಿಟ್ಟಿನಲ್ಲಿ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಗಳಾದ ಮುಸ್ಸಾವಿರ್ ಹುಸೇನ್ ಶ್ಜಿಬ್ ಮತ್ತು ಅಬ್ದುಲ್ ಮಥೀನ್ ತಾಹಾ ಎಂಬ ನಿಜವಾದ ಆರೋಪಿ ಮತ್ತು ಸಹ ಸಂಚುಕೋರರನ್ನು ಬಂಧಿಸಿದ್ದೇವೆ ಎಂದು NIA ಏ. 5 ರ ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟವಾಗಿ ಹೇಳಿದೆ. ಮೇಲಿನವರನ್ನು ಹೊರತುಪಡಿಸಿ, ಯಾವುದೇ ಇತರ ವ್ಯಕ್ತಿಯನ್ನು ಬಂಧಿಸಿರುವ ಬಗ್ಗೆ ಉಲ್ಲೇಖಿಸಲಾಗಿಲ್ಲ. ಆದರೆ, ಕಾಂಗ್ರೆಸ್ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ಅವರು ದುರುದ್ದೇಶಪೂರಿತ ಮತ್ತು ಆಧಾರರಹಿತ ಆರೋಪಗಳನ್ನು ಮತ್ತು ಸುಳ್ಳು ಹೇಳಿಕೆಗಳನ್ನು ಮಾಡಿದ್ದಾರೆ ಎಂದು ನಾನು ಹೇಳುತ್ತೇನೆ.

ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ, ಪ್ರಚೋದನೆಯನ್ನು ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ವಿರುದ್ಧ ಸುಳ್ಳು, ನಕಲಿ ಸುದ್ದಿಗಳನ್ನು ಹರಡಲಾಗಿದೆ. ಇದಲ್ಲದೆ, ಘಟನೆಯನ್ನು ವಿವಿಧ ಧರ್ಮಗಳಿಗೆ ಜೋಡಿಸಲು, ಧರ್ಮಗಳು ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹುನ್ನಾರ ಇದಾಗಿದೆ. ಈ ಮೂಲಕ ಹಾಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 153 ಎ, ಮತ್ತು 505 ರ ಅಡಿಯಲ್ಲಿ ಸ್ಪಷ್ಟವಾಗಿ ಉಲ್ಲಂಘನೆ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಹಿನ್ನಲೆ ಅವರ ವಿರುದ್ದ ದೂರನ್ನು ದಾಖಲಿಸಲು ಮನವಿ ಮಾಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago