PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ.

ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. ಏಪ್ರಿಲ್‌ 15 ರಿಂದ ಮೇ. 15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಜಲಸಂಪನನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 400 ಕ್ಕೂ ಹೆಚ್ಚು ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನ ಹೊರಡಿಸಲಾಗಿದ್ದು, ಉಳಿಕೆ ಮೂಲ ವೃಂದದಲ್ಲಿನ ಖಾಲಿ ಇರುವ 313 ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಏಪ್ರಿಲ್‌ 29 ರಿಂದ ಮೇ. 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ ಸಿ ವೆಬ್‌ ಸೈಟ್‌ ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ

29-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

28-05-2024

ಶುಲ್ಕ ಪಾವತಿಗೆ ಕೊನೆಯ ದಿನಾಂಕ

28-05-2024

ಅರ್ಜಿ ಸಲ್ಲಿಸುವ ಹಂತಗಳು/ ಅರ್ಜಿ ಸಲ್ಲಿಸುವ ಪ್ರಕ್ರಿಯೆ

ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿಮಾಡಿ ಸಲ್ಲಿಸಿದ ಮಾತ್ರಕ್ಕೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ಎಲ್ಲಾ ಪರತ್ರುಗಳನ್ನು ಪೂರೈಸಿರುತ್ತಾರೆ ಎಂದಲ್ಲ. ತದನಂತರದಲಿ., ಅರ್ಜಿಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು ಹಾಗೂ ಯಾವುದೇ ಹಂತದಲಿ.. ನ್ಯೂನತೆಗಳು ಕಂಡುಬಂದಲಿ ಅಂತಹ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು

ಈ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಒಂದುಬಾರಿಯ ನೋಂದಣಿ ಪ್ರಕ್ರಿಯೆಯನ್ನು ಒಳಗೊಂಡಿದ್ದು (OTR-ONE TIME REGISTRATION) ಅಭ್ಯರ್ಥಿಗಳು ನೀಡಿರುವಮಾಹಿತಿಯನ್ನು ಮುಂದಿನ ಪರಿಗಣಿಸಲಾಗುವುದರಿಂದ, ಅಭ್ಯರ್ಥಿಗಳು Profile Creation / ರುಜುವಾತುಗಳು ಸೃಷ್ಟಿಸುವ ಹಂತದಲಿ ಅತೀ ಓದಿಕೊಳ್ಳತಕ್ಕದ್ದು, ಈ ಕೆಳಕಂಡ ಸೂಚನೆಗಳನ್ನು ಓದಿದನಂತರವೇ ಅರ್ಜಿಯನ್ನು ಭರ್ತಿಮಾಡತಕ್ಕದ್ದು ಜಾಗರೂಕತೆಯಿಂದ ಎಲ್ಲಾ, ಮಾಹಿತಿಗಳನ್ನು ಭರ್ತಿ ಮಾಡಬೇಕಾಗಿದೆ, ಅಭ್ಯರ್ಥಿಗಳು ಸೂಚನೆಗಳನ್ನು ಹಂತಹಂತವಾಗಿ

“ವೈಯಕ್ತಿಕ ವಿವರದಲಿ…” SSLC ಯನ್ನು 2002 ಅಥವಾ ಅದಕ್ಕಿಂತ ಹಿಂದೆ ಅಧ್ಯಯನ ಮಾಡಿದ ಅಭ್ಯರ್ಥಿಗಳು ವಿವರಗಳನ್ನು ಸ್ವತ: (Manual Entry] ನಮೂದು ಮಾಡಬೇಕಾಗಿರುತ್ತದೆ, 2003 ಮತ್ತು ನಂತರದಲ್ಲಿ. ಆಧ್ಯಯನ ಮಾಡಿದ ಅಭ್ಯರ್ಥಿಗಳು SSLC ನೋಂದಣಿ ಸಂಖ್ಯೆಯನ್ನು ನಮೂದಿಸಿದಲಿ. ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

ವೈಯಕ್ತಿಕ ವಿವರದಲಿ.. CBSE ಯನ್ನು 2003 ಅಥವಾ ಅದಕ್ಕಿಂತ ಹಿಂದೆ ಅಧ್ಯಯನ ಮಾಡಿದ ಅಭ್ಯರ್ಥಿಗಳು ವಿವರಗಳನ್ನು ಸ್ವತManual Entry] ನಮೂದು ಮಾಡಬೇಕಾಗಿರುತ್ತದೆ, 2004 ಮತ್ತು ನಂತರದಲಿ.. ಅಧ್ಯಯನ ಮಾಡಿದ ಅಭ್ಯರ್ಥಿಗಳು CBSE ನೋಂದಣಿ ಸಂಖ್ಯೆಯನ್ನು ನಮೂದಿಸಿದಲಿ. ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

ವಿದ್ಯಾರ್ಹತೆಯ ವಿವರದ… PUC ತರಗತಿಯನ್ನು 2007 ಅಥವಾ ಅದಕ್ಕಿಂತ ಹಿಂದೆ ಅಭ್ಯಸಿಸಿದ್ದಲಿ.. ಅಥವಾ ಯಾವುದೇ ಡಾಟಾ ಬಾರದೇ ಇದ್ದಲಿ.. ಸ್ವತಃ ವಿವರಗಳನ್ನು ನಮೂದಿಸುವುದು,

PUC ತರಗತಿಯನ್ನು 2008 ಮತ್ತು ನಂತರದಲಿ ಅಧ್ಯಯನ ಮಾಡಿದ ಅಭ್ಯರ್ಥಿಗಳು PUC ನೋಂದಣಿ ಸಂಖ್ಯೆಯನ್ನು ನಮೂದಿಸಿದಲ್ಲಿ, ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

“ಗುರುತಿನಪುರಾವೆ /ವಿವರದಲ್ಲಿ..” Adhar / Kutumba ID /Ration Card / UDID ಸಂಖ್ಯೆಗಳನ್ನು ನಮೂದಿಸಿದಲಿ. ನಿಮ್ಮ ಖಾಯಂ ವಿಳಾಸದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲಾಗುವುದು.

“ಮೀಸಲಾತಿ ವಿವರದಲಿ ನೀವು ಮೀಸಲಾತಿಯನ್ನು ಪಡೆಯಲು ಇಚ್ಚಿಸಿದಲಿ. ನಿಮ್ಮ ಜಾತಿ ಮೀಸಲಾತಿ / HK ಮೀಸಲಾತಿ ಪ್ರಮಾಣ ಪತ್ರದ RD ಸಂಖ್ಯೆಯನ್ನು ನಮೂದಿಸಿದಲಿ API ಮೂಲಕ ವಿವರಗಳನ್ನು ಸ್ವಯಂಚಾಲಿತವಾಗಿ ಪಡೆಯಲಾಗುವುದು ಅಥವಾ ಸ್ವತ; ಅಭ್ಯರ್ಥಿಗಳು (Manual Entry ] ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿರುತ್ತದೆ,

ಅಭ್ಯರ್ಥಿಗಳು KPSC ವೆಬ್‌ಸೈಟ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು, ಇದರ ಹೊರತಾಗಿ ಯಾವುದೇ ಇತರ ಮೂಲಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago