POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ ಅನುಸರಿಸು­ತ್ತಿರುವ ಕುರಿತು ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಮಾಡಲಾಗಿತ್ತು.

ವರದಿ ಪ್ರಸಾರವಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪಟ್ಟಣದ ಗ್ರಾಪ ಪಿಡಿಓ ಮಧುಸೂಧನ್ ಬುಧವಾರ ಸಾಗರ ರಸ್ತೆಯಲ್ಲಿ ಸಿಬ್ಬಂದಿಗಳೊಂದಿಗೆ ಅನಧಿಕೃತ ಕಟ್ಟಡದ ಅಳತೆಯನ್ನು ಮಾಡಿ ಕಟ್ಟಡದ ಮಾಲೀಕರಿಗೆ ಕೂಡಲೇ ಕಟ್ಟಡ ತೆರವುಗೊಳಿಸಿ ಅಭಿವೃದ್ಧಿ ಕಾರ್ಯಕ್ಕೆ ಕೈ ಜೋಡಿಸುವಂತೆ ವಾರ್ನಿಂಗ್ ನೀಡಿದ್ದಾರೆ ಅದಕ್ಕೆ ಕಟ್ಟಡದ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿರುವ ಗಾಯತ್ರಿ ಚಂದ್ರಪ್ಪ ಎಂಬುವವರ ಮಾಲೀಕತ್ವದ ಗಣೇಶ್ ಸ್ಟೀಲ್ ಅಂಡ್ ಹೋಮ್ ಅಪ್ಲಾಯನ್ಸ್ ಅಂಗಡಿಯ ಕಟ್ಟಡ ರಸ್ತೆ ಕಾಮಗಾರಿಗೆ ಅಡ್ಡಲಾಗಿ ಇರುವುದರಿಂದ ಕಾಮಗಾರಿ‌ ಕುಂಠಿತವಾಗಿತ್ತು ಈ ಬಗ್ಗೆ PM ನ್ಯೂಸ್ ಸವಿಸ್ತರಾದ ವರದಿ ಮಾಡಿತ್ತು.

ನಮ್ಮ ವರದಿಗೆ ಸ್ಪಂದಿಸಿ ತತ್ತಕ್ಷಣ ಕಾರ್ಯೊನ್ಮುಖರಾದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ವಿನಾಯಕ ವೃತ್ತ ಸೇರಿದಂತೆ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿರುವ ಕೆಲವು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುತ್ತಾರ ಎಂದು ಕಾದುನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago