ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ
ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು.
ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಪೈಪ್ ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಒಡೆದಿರುವ ಹಿನ್ನಲೆಯಲ್ಲಿ ನೀರು ಸರಬರಾಜು ಆಗುವುದರಲ್ಲಿ ತೊಂದರೆ ಆಗಲಿದೆ. ಜೊತೆಗೆ ಪೈಪ್ ಒಡೆದಿರುವುದಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ ಎಂದು ವರದಿ ಪ್ರಸಾರ ಮಾಡಲಾಗಿತ್ತು.
ಸ್ಥಳ ಪರಿಶೀಲನೆ ನಡೆಸಿದ ತಾಪಂ ಕಾರ್ಯನಿರ್ವಣಾಧಿಕಾರಿ ನರೇಂದ್ರ ಕುಮಾರ್ ಕೂಡಲೇ ಪೈಪ್ ನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಪಿಡಿಓ ಮಧುಸೂಧನ್ ರವರಿಗೆ ಸೂಚಿಸಿದ್ದಾರೆ.


