Ripponpete | ಆಟೋ ನಿಲ್ದಾಣ ತೆರವು, ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಬಿರುಸು

Ripponpete | ಆಟೋ ನಿಲ್ದಾಣ ತೆರವು, ರಸ್ತೆ ಅಗಲೀಕರಣ ಕಾಮಗಾರಿ ಬಿರುಸು

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಅಂಗಡಿ‌ ಮುಂಗಟ್ಟು ಹಾಗೂ ಆಟೋ ನಿಲ್ದಾಣದ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.


ಪಟ್ಟಣದ ಹಳೇ ಚಿತ್ರಮಂದಿರದಿಂದ ವಿನಾಯಕ ವೃತ್ತದವರೆಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ತೀರ್ಥಹಳ್ಳಿ ರಸ್ತೆಯ ಬಲಬದಿಯ ಅಂಗಡಿ‌ ಮುಂಗಟ್ಟುಗಳನ್ನು ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದಾರೆ.

ತೀರ್ಥಹಳ್ಳಿ ರಸ್ತೆಯಲ್ಲಿ ಆಟೋ ನಿಲ್ದಾಣ ತೆರವು ಹಿನ್ನಲೆಯಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ಪಿಡಿಓ ಮಧುಸೂಧನ್ ಮಾತುಕತೆ ನಡೆಸಿ ಯಾವುದೇ ಗೊಂದಲವಿಲ್ಲದೇ ತೆರವು ಕಾರ್ಯಾಚರಣೆ ನಡೆದಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.


ಮುಂದಿನ ದಿನಗಳಲ್ಲಿ ಶಾಶ್ವತ ಆಟೊ ನಿಲ್ದಾಣ ನಿರ್ಮಿಸಿಕೊಡುವಂತೆ ಪಿಡಿಓ ಮಧುಸೂಧನ್ ಬಳಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದವರು ಬೇಡಿಕೆಯಿಟ್ಟಿದ್ದು ಸೂಕ್ತ ಸ್ಥಳದಲ್ಲಿ ಶಾಶ್ವತ ಆಟೋ ನಿಲ್ದಾಣ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

ತೀರ್ಥಹಳ್ಳಿ ರಸ್ತೆಯ ಎಡಬದಿಯ ಅಂಗಡಿ ತೆರವು ಕಾರ್ಯಾಚರಣೆ ಮುಂದಾದಾಗ ಕಟ್ಟಡದ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು ಸಾಗರ ರಸ್ತೆಯ ಅನಧಿಕೃತ ಕಟ್ಟಡ ತೆರವುಗೊಳಿಸಿ ಬನ್ನಿ ನಾವೇ ಸ್ವಯಂ ತೆರವುಗೊಳಿಸಿ ಕೊಡುತ್ತೇವೆ ಎಂದು ಪಟ್ಟು ಹಿಡಿದಿರುವ ಹಿನ್ನಲೆಯಲ್ಲಿ ಕಾಮಗಾರಿ ವಿಳಂಬವಾಗು ಸಾಧ್ಯತೆ ಹೆಚ್ಚಾಗಿ ಕಾಣುತಿದ್ದು ಪಟ್ಟಣದ ಖಡಕ್ ಪಿಡಿಓ ಮಧುಸೂಧನ್ ಏನೂ ಕ್ರಮ ಕೈಗೊಳ್ಳುತ್ತಾರೋ ಕಾದು ನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

52 minutes ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

1 hour ago

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…

12 hours ago

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago