ರಿಪ್ಪನ್ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು.
25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು.
ರಿಪ್ಪನ್ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ಮತ್ತು ಶ್ರೀಚಂಡಿಕೇಶ್ವರಿ ಅಮ್ಮನವರ ದೇವಸ್ಥಾನ ಶ್ರದ್ದಾ ಭಕ್ತಿಯೊಂದಿಗೆ ವಾರ್ಷೀಕ ವರ್ಧಂತಿ’ ಮಹೋತ್ಸವ ಕೋಡೂರು ವೇ.ವಿದ್ವಾನ್ ಅನಂತಮೂರ್ತಿ ಭಟ್ ಇವರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯವು ಸಂಪನ್ನಗೊಂಡಿತು.
ಲೋಕಕಲ್ಯಾರ್ಥವಾಗಿ ಬೆಳಗ್ಗೆ ಗಣಪತಿ ಪ್ರಾರ್ಥನೆ ಹಾಗೂ ಶ್ರೀರುದ್ರಹೋಮ,ಶ್ರೀದುರ್ಗಾ ಹೋಮ ವಿಶೇಷಪೂಜೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.
ಶ್ರೀ ಕ್ಷೇತ್ರ ಅಲಸೆ ಶ್ರೀಚಂಡಿಕೇಶ್ವರಿ ನಾಗೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ “ನೂತನ ಪೌರಾಣಿಕ ಪ್ರಸಂಗ’’ ಕಾಲಮಿತಿ ಯಕ್ಷಗಾನ ಪ್ರದರ್ಶನ ಜರುಗಿತು.
ಜಿಲ್ಲೆ ಹೊರಜಿಲ್ಲೆಯಿಂದ ಸಹಸ್ರಾರು ಭಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್