Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.


ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ  ಕಂದಾಯ ಇಲಾಖೆಸೇರಿ ರಿಪ್ಪನ್‌ಪೇಟೆಯಲ್ಲಿ ಮತದಾನ ಜಾಗೃತಿ ಜಾಥಾ ನಡೆಸಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ , ಮ್ಯೂಸಿಕಲ್ ಚೇರ್ ಹಾಗೂ ಕೆರೆದಡ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.


ಸ್ಪರ್ಧೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತದಾನ ಜಾಗೃತಿ ಕುರಿತಾಗಿ ‘ರಂಗೋಲಿ ಚಿತ್ರ’ ಬಿಡಿಸಿದರು. ರಂಗೋಲಿ ಸ್ಪರ್ಧೆ ಮೂಲಕ “ಮತದಾನ ನಮ್ಮ ಹಕ್ಕು, ನಮ್ಮ ಕರ್ತವ್ಯ” ಎಂಬ ಸಂದೇಶ ಸಾರಲಾಯಿತು.ನಂತರ ಎಲ್ಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿದವರಿಗೆ ಬಹುಮಾನ ವಿತರಿಸಲಾಯಿತು.


ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲ್ಲೂಕ್ ಪಂಚಾಯ್ತಿ ಕಾರ್ಯನಿರ್ವಾಹಕ ಆಧಿಕಾರಿ ನರೇಂದ್ರಕುಮಾರ್ ಚುನಾವಣೆ ದೊಡ್ಡ ಪರ್ವ ಮತದಾನ ನಮ್ಮಲ್ಲರ ಹಕ್ಕು ಈ ಭಾರಿಯ ಲೋಕಸಭಾ ಚುನಾವಣೆ ಹೊಸನಗರ ತಾಲ್ಲೂಕಿನಲ್ಲಿ ಮತದಾನದ ಪ್ರಮಾಣ ಹೆಚ್ಚಬೇಕು.ತಾವು ಮತದಾನಮಾಡಿ ಅಕ್ಕಪಕ್ಕದವರೂ ಮತದಾನ ಮಾಡುವಂತೆ ಉತ್ತೇಜಿಸುವುದರೊಂದಿಗೆ ಶೇಕಡಾ 100 ರಷ್ಟು ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.


”ಮಹಿಳೆಯರು ಹೆಚ್ಚು ಒತ್ತಡದ ಬದುಕಿನಲ್ಲಿ ಜೀವನ ನಡೆಸುತ್ತಾರೆ. ಹೀಗಾಗಿ ಮಹಿಳಾ ಮತದಾರರನ್ನು ಮತದಾನದತ್ತ ಸೆಳೆಯುವ ದೃಷ್ಟಿಯಿಂದ ಜಿಲ್ಲಾ ಸ್ವೀಪ್‌ ಸಮಿತಿ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುತ್ತಿದೆ. ಈ ಮೂಲಕ ಕಡ್ಡಾಯ ಮತದಾನದ ಅರಿವು ಮೂಡಿಸಲಾಗುತ್ತದೆ,” ಎಂದರು.

ಪ್ರತಿಯೊಬ್ಬರು ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ ಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಸಿದ್ದರಾಗಿ ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕ್ ಪಂಚಾಯ್ತಿ ಸಹಾಯಕ ನಿರ್ದೇಶಕ ರಾಜೇಂದ್ರಕುಮಾರ್,ಗ್ರಾಮ ಪಂಚಾಯ್ತಿ ಪಿಡಿಓ ಮಧುಸೂಧನ್, ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸಿಬ್ಬಂದಿಗಳಾದ ನಾಗೇಶ್‌ಮೋರೆ,ರಾಜೇಶ್,ಹಾಗೂ ಎನ್.ಆರ್.ಇ.ಜಿ.ತಾಲ್ಲೂಕ್ ಮಟ್ಟದ ಅಧಿಕಾರಿವರ್ಗ ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

4 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

4 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago