Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.


ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ ಅನುಸರಿಸು­ತ್ತಿರುವ ಕುರಿತು ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಮಾಡಲಾಗಿತ್ತು.

ವರದಿ ಪ್ರಸಾರವಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಕಾರ್ಯ ನಿರ್ವಹಣಾಧಿಕಾರಿಗಳ ನಿರ್ದೇಶನದಂತೆ ಪಟ್ಟಣದ ಗ್ರಾಪ ಪಿಡಿಓ ಮಧುಸೂಧನ್ ಪೊಲೀಸ್ ಇಲಾಖೆಯ ರಕ್ಷಣೆಯೊಂದಿಗೆ ಕಟ್ಟಡ ತೆರವುಗೊಳಿಸಲು ಮುಂದಾದರು ಈ ಸಂಧರ್ಭದಲ್ಲಿ ಯಾವುದೇ ಕಾರಣಕ್ಕೂ ಕಟ್ಟಡ ತೆರವಿಗೆ ಅವಕಾಶ ನೀಡುವುದಿಲ್ಲ ಎಂದು ಕಟ್ಟಡದ ಮಾಲೀಕರು ಪಟ್ಟು ಹಿಡಿದು ಕುಳಿತರು.


ಕೊನೆಗೆ ಈ ತಿಂಗಳ 20 ನೇ ತಾರೀಖಿನವರೆಗೂ ಕಾಲಾವಕಾಶ ನೀಡಿದ ಪಿಡಿಓ ಪಟ್ಟಣದ ಅಭಿವೃದ್ದಿಗೆ ಸ್ಪಂದಿಸುವಂತೆ ಮಾಲೀಕರಿಗೆ ಸೂಚಿಸಿದ್ದಾರೆ.

ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಗ್ರಾಪಂ ಮಾಜಿ ಉಪಾಧ್ಯಕ್ಷ ರವೀಂದ್ರ ಕೆರೆಹಳ್ಳಿ 20 ನೇ ತಾರೀಖಿಗೆ ಅನಧಿಕೃತ ಕಟ್ಟಡ ತೆರವುಗೊಳಿಸದೇ ಇದ್ದಲ್ಲಿ ಕಟ್ಟಡದ ಮುಂಭಾಗದಲ್ಲಿ ಸಾರ್ವಜನಿಕರ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದರು.

ಕಟ್ಟಡ ತೆರವಿಗೆ ಮುಂದಾದ ಸಮಯದಲ್ಲಿ ಹೊಸನಗರದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ಪಲಾಯನಗೈದದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.

Leave a Reply

Your email address will not be published. Required fields are marked *