Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ
ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ಹೊಸನಗರ ತಾಲೂಕು ರಿಪ್ಪನ್‌ಪೇಟೆ ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಪಟ್ಟಣದ ಶ್ರೀ ರಾಮಮಂದಿರದಲ್ಲಿ ರಾಮನವಮಿಯ ಅಂಗವಾಗಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂಧರ್ಭದಲ್ಲಿ ವಿಪ್ರ ಬಾಂಧವರು ತಮ್ಮ ಜಿಲ್ಲೆಯ ನೆಚ್ಚಿನ ಲೋಕಸಭಾ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ಅತಿ ಹೆಚ್ಚಿನ ಮತಗಳಿಂದ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಮೋದಿಜಿಯವರು ಪ್ರಧಾನಿಯಾಗಲಿ ಎಂದು ಶ್ರೀರಾಮಚಂದ್ರನಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು.
ಈ ಸಂಧರ್ಭದಲ್ಲಿ ಸಮಾಜದ ಪ್ರಮುಖರಾದ ಪದ್ಮಾ ಸುರೇಶ್ ,ಎಚ್ ಪಿ ಸುರೇಶ್ , ಜಿಎಸ್ ಪುರಾಣಿಕ್ ಶಿವಾನಂದ ಸವಿತಾ ರಾಧಾಕೃಷ್ಣ ಅಮಿತಾ ಬಲ್ಲಾಳ್, ಸರಸ್ವತಿ ಪ್ರೇಮಚಂದ್ರ, ಸುಜಾತ ದೇವಕಿ ಮಂಗಳೂರುಕರ್, ದೀಪ ಸುಧೀಂದ್ರ ಹೆಬ್ಬಾರ್, ಕುಸುಮ ಬಾಲಚಂದ್ರ, ಮಾನಸ ಪುರುಷೋತ್ತಮ್ ಹಾಗೂ ಎಲ್ಲಾ ವಿಪ್ರ ಬಾಂಧವರು ಭಾಗವಹಿಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್