Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು.


ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕಳೆದ 29 ದಿನಗಳೀಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಮಂಗಳವಾರ ಕರಾವಳಿಯಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ  ಇಂದು ಸಡಗರ ಹಾಗೂ ಸಂಭ್ರಮದಿಂದ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರ ಯಾದಿಯಾಗಿ ಭಕ್ತಿಪೂರ್ವಕವಾಗಿ ಈದ್ಗಾ ಮೈದಾನದಲ್ಲಿ ನಮಾಜ್ ಮಾಡಿ ಪರಸ್ಪರ ಶುಭಕೋರಿ ರಂಜಾನ್ ಹಬ್ಬವನ್ನು ಆಚರಣೆ ಮಾಡಿದರು.


ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ನಂತರದಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ ಮಾತನಾಡಿ, ಪೈಗಂಬರ್ ಜೀವನ ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಜೀವನ ಸಾರ್ಥಕವಾಗುವುದು ಎಲ್ಲ ಧರ್ಮದ ಸಾರವುದು ಒಂದೇ ಅಗಿದೆ ಭಾರತ ದೇಶ ವಿವಿಧತೆಯಲ್ಲಿ ಏಕತೆಯ ದೇಶವಾಗಿದೆ ಯಾವುದೇ ಜಾತಿ ಭಾವನೆ ತೋರದೆ ಸರ್ವ ಧರ್ಮದ ಭಾವೈಕ್ಯತೆಯ ದೇಶವಾಗಿದೆ .

ಭಾರತ ದೇಶದಲ್ಲಿ ಹಲವಾರು ಧರ್ಮ ಜಾತಿ ಪಂಗಡಗಳಿವೆ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ ಇದನ್ನು ಸಂವಿಧಾನದ ಅಡಿಯಲ್ಲಿ ಉಪಯೋಗಿಸಿಕೊಂಡು ಪರಸ್ಪರ ಸಾಮರಸ್ಯವನ್ನು, ಸಹಿಷ್ಣುತೆಯನ್ನು ಅಳವಡಿಸಿಕೊಂಡು ಪ್ರೀತಿ ಗೌರವದೊಂದಿಗೆ ಬಾಳಬೇಕಾಗಿದೆ. ಯಾವುದೇ ಧರ್ಮಗಳನ್ನಾಗಲಿ ಪಂಗಡಗಳನ್ನಾಗಲಿ ಜಾತಿಯವರನ್ನಾಗಲಿ ಹೀಯಾಳಿಸುವ ಅಧಿಕಾರ ಇಸ್ಲಾಂ ಧರ್ಮ ಕೊಡಲಿಲ್ಲ.ಯಾವುದೇ ಧರ್ಮದ ಅಥವಾ ಪಂಗಡದ ಒಬ್ಬ ವ್ಯಕ್ತಿಯನ್ನು ಅನ್ಯಾಯವಾಗಿ ಕೊಂದರೆ ಇಡೀ ಜನ ಸಮೂಹವನ್ನೇ ಕೊಲೆ ಮಾಡಿದ ಶಿಕ್ಷೆಯನ್ನು ಆತನಿಗೆ ಅಲ್ಲಾಹು ನೀಡುತ್ತಾನೆ ಎಂದು ಬೋಧಿಸುವ ಧರ್ಮವಾಗಿದೆ ಇಸ್ಲಾಂ ಎಂದು ಹೇಳಿದರು.


ಧರ್ಮ ಧರ್ಮಗಳ ನಡುವಿನ ಸಂಘರ್ಷಗಳನ್ನು ಬದಿಗೊತ್ತಿ ಭಾವೆಕ್ಯತೆ, ಸಹೋದರತ್ವ, ಭ್ರಾತೃತ್ವದಿಂದ ಬದುಕೋಣ ಎಂದು ಈ ಸಂದರ್ಭದಲ್ಲಿ ಕರೆ ನೀಡಿದರು.

ಈ ಸಂಧರ್ಭದಲ್ಲಿ ಜುಮ್ಮಾ ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫ಼ಿ,ಕಾರ್ಯದರ್ಶಿ ಮಹಮ್ಮದ್ ಶಫ಼ಿ ,ಮೆಕ್ಕಾ ಮಸ್ಜಿದ್ ಅಧ್ಯಕ್ಷರಾದ ಅಮೀರ್ ,ಕಾರ್ಯದರ್ಶಿ ರೋಷನ್ ರಫ಼ಿ ಮುಖಂಡರಾದ ಅರ್ ಎ ಚಾಬುಸಾಬ್,ಅಮೀರ್ ಹಂಜಾ ಗ್ರಾಪಂ ಸದಸ್ಯ ಆಸೀಫ಼್ ಭಾಷಾ, ಆರ್ ಎಸ್ ಶಂಶುದ್ದೀನ್, ಭಾಪುಖಾನ್ , ಹಸನಬ್ಬ, ನಾಸೀರ್ ,ರೆಹಮಾನ್ ಚಾಲಿ ಮಾಜಿ ಗ್ರಾಪಂ ಸದಸ್ಯ ವಾಹಿದ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

5 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago