ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ.
ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ.
ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ ಬಂಧಿಸಲಾಗಿದೆ.
ನಡೆದಿದ್ದೇನು..???
ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮತ್ ಲೇಔಟ್ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು ನಿಲ್ಲಿಸಿಕೊಂಡು, ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಎಸ್ಪಿ ಮಿಥುನ್ ಕುಮಾರ್ ಜಿ ಕೆ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ ಹಾಗೂ ಕಾರಿಯಪ್ಪ ಎ ಜಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಾಬು ಆಂಜನಪ್ಪ ತುಂಗನಗರದ ಪಿಐ ಮಂಜುನಾಥರವರ ಮೇಲ್ವಿಚಾರಣೆಯಲ್ಲಿ, ಪಿಎಸ್ಐ ರಘುವೀರ್, ಹಾಗೂ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಗೋಪಾಳದ ಸಮೀರ @ ಸಯ್ಯದ್ ಸಮೀರ (23) ಈತನನ್ನು ವಶಕ್ಕೆ ಪಡೆಯಲಾಗಿದೆ. ಅಂದಾಜು ಮೌಲ್ಯ 10,000 /- ರೂ ಗಳ 250 ಗ್ರಾಂ ಒಣ ಗಾಂಜಾ, ರೂ 400 ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಆಟೋವನ್ನು ಅಮಾನತು ಪಡಿಸಿಕೊಳ್ಳಲಾಗಿದೆ.
ತುಂಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್