ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News
ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19)  ಬಂಧಿತ ಆರೋಪಿಗಳಾಗಿದ್ದಾರೆ.
ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ,   ಮತ್ತು  ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ  ತಿಪ್ಪೇಸ್ವಾಮಿ ಪೊಲೀಸ್ ನಿರೀಕ್ಷಕರು ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ 1) ಮೋಹನ, 29 ವರ್ಷ, ಗಾಡಿಕೊಪ್ಪ ಶಿವಮೊಗ್ಗ ಮತ್ತು 2) ಮಿಥುನ್ 19 ವರ್ಷ ಗೋಪಾಳ ಶಿವಮೊಗ್ಗ ಇವರನ್ನು ವಶಕ್ಕೆ ಪಡೆದು, ಸದರಿಯವರಿಂದ ಅಂದಾಜು ಮೌಲ್ಯ 75,000/- ರೂ ಗಳ ಒಟ್ಟು 715 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತುಪಡಿಸಿಕೊಂಡು, ಆರೋಪಿತರ ವಿರುದ್ಧ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0044/2024 ಕಲಂ 20 (ಬಿ) II (ಎ) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
 
                         
                         
                         
                         
                         
                         
                         
                         
                         
                        


