w
Headlines
Home » ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY

ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | BSY


ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. 

ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆಯಾಗಿದ್ದಾರೆ, ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಮನವಿ ಮಾಡಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿತ್ತು.


ಆಗ ಅವರು ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಾಂತ್ವನ ಹೇಳಿದ್ದರು ಎನ್ನಲಾಗಿತ್ತು. ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೆ ಆರೋಪ ಮಾಡಿದ್ದಳು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಈಗ ಪ್ರಕರಣದ ದೂರುದಾರೆ ಮಮತಾ ಮೃತಪಟ್ಟಿರುವುದು ಹಲವು ಆಯಾಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.