ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident
ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ.
ವೀಡಿಯೋ ಇಲ್ಲಿ ವೀಕ್ಷಿಸಿ👇
ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ದಂಪತಿಗಳನ್ನು ತಮ್ಮ ವಾಹನದಲ್ಲಿಯೇ ಸಾಗರದ ಆಸ್ಪತ್ರೆಗೆ ದಾಖಲಿಸಿದರು.
ಸಿಗಂದೂರು ದೇವಸ್ಥಾನಕ್ಕೆ ತೆರಳಿ ಹಿಂದಿರುಗುತಿದ್ದ ದಂಪತಿಗಳು ಹೊಸಗುಂದ ದೇವಸ್ಥಾನದ ತಿರುವಿನಲ್ಲಿ ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ಬೆಂಗಾವಲು ವಾಹನದಲ್ಲಿಯೇ ಸಾಗರ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದರು.
ಶಾಸಕರ ಈ ಕಾರ್ಯವೈಖರಿಗೆ ಸಾರ್ವಜನಿಕರು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.
		 
                         
                         
                         
                         
                         
                         
                         
                         
                         
                        
