ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News
ಹೊಲದಲ್ಲಿ ಉಳುಮೆ ಮಾಡುವಾಗ ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ನಡೆದಿದೆ.
ಚೆನ್ನಳ್ಳಿ ಗ್ರಾಮದ ಮಹೇಶ್ ಎಂಬುವರ ಮಗ ಅಭಯ್ (14), ಇದೇ ಗ್ರಾಮದ ಮಾಲತೇಶ್ (26) ಮೃತ ದುರ್ದೈವಿಗಳು.
ಮಹೇಶ್ ಮಾಲೀಕತ್ವದ ಟ್ರ್ಯಾಕ್ಟರ್ನಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಮಾಲತೇಶ್. ಇದೇ ವೇಳೆ ಮಹೇಶ್ ಮಗ ಅಭಯ್ ಟ್ರ್ಯಾಕ್ಟರ್ ಮೇಲೆ ಕುಳಿತು ಮಾಲತೇಶ್ ಹಿಂದೆ ದುಂಬಾಲು ಬಿದ್ದು ಜಮೀನಿಗೆ ಹೋಗಿದ್ದ.
ಅಭಯ್ನನ್ನ ಕೆಳಗಿಳಿಸಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಕೃಷಿ ಹೊಂಡದ ಪಕ್ಕ ನಿಂತಿದ್ದ ಅಭಯ್ ಅಯಾತಪ್ಪಿ ಹೊಂಡಕ್ಕೆ ಬಿದ್ದಿದ್ದಾನೆ. ಕೃಷಿ ಹೊಂಡದಿಂದ ಮೇಲೆ ಬರಲಾರದೆ ಒದ್ದಾಡುವುದನ್ನು ಕಂಡು ಮಾಲತೇಶ್ ಟ್ರ್ಯಾಕ್ಟರ್ ನಿಲ್ಲಿಸಿ ಬಾಲಕನನ್ನ ಮೇಲೆತ್ತಲು ಧಾವಿಸಿದ್ದಾನೆ. ಆದರೆ ಕೃಷಿ ಹೊಂಡದಿಂದ ಇಬ್ಬರೂ ಮೇಲೆ ಬರಲಾಗದೆ ಮುಳುಗಿದ್ದಾರೆ. ಜೀವಭಯದಿಂದ ಮಾಲತೇಶರನ್ನ ಬಿಗಿದಪ್ಪಿದ್ದ ಬಾಲಕ. ಇತ್ತ ಮಗುವನ್ನು ರಕ್ಷಿಸಲಾಗದೆ, ತಾನೂ ಹೊರಬರಲಾಗದೆ ಕೃಷಿ ಹೊಂಡದಲ್ಲಿ ಸಾವನ್ನಪ್ಪಿದ್ದಾನೆ
ಗಿರಿದೀಪಂ ಶಾಲೆಯ ವಿದ್ಯಾರ್ಥಿ ಅಭಯ್ ಈ ಬಾರಿ 9ನೇ ತರಗತಿಗೆ ಹೋಗಬೇಕಿತ್ತು. ಇನ್ನು ಮಾಲತೇಶ್ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದು, ಪತ್ನಿ ಗರ್ಭಿಣಿಯಾಗಿದ್ದು, ಕೆಲವೇ ದಿನಗಳಲ್ಲಿ ಅಪ್ಪನಾಗುತ್ತಿದ್ದ. ಆದರೆ ವಿಧಿಯಾಟದಿಂದ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ.
ಗ್ರಾಮಸ್ಥರಿಗೆ ವಿಷಯ ತಿಳಿಯುತ್ತಿದ್ದಂತೆ ಜಮೀನಿಗೆ ಬಂದು ಕೃಷಿ ಹೊಂಡದಲ್ಲಿ ಬಲೆ ಬಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್