ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ
24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ
ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ ದಾಳಿಗೆ ಒಳಗಾದ ರೈತ ತಿಮ್ಮಪ್ಪ ಕುಟುಂಬಕ್ಕೆ 24 ಗಂಟೆಯೊಳಗೆ 15 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸರ್ಕಾರ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.
ಅರಣ್ಯ ಇಲಾಖೆಯ ಅಧಿಕಾರಿಗಳು ಇಲ್ಲ ಸಲ್ಲದ ಕಥೆ ಹೇಳಿದರೇ ಸುಮ್ಮನಿರಲು ಸಾಧ್ಯವಿಲ್ಲ, ಶನಿವಾರ ಸಂಜೆಯೊಳಗೆ ಸೂಕ್ತ ಪರಿಹಾರ ಘೋಷಿಸಬೇಕು ಇಲ್ಲದಿದ್ದರೇ ಹೋರಾಟ ಅನಿವಾರ್ಯಗುತ್ತದೆ, ಅರಣ್ಯ ಇಲಾಖೆಯ ವಿರುದ್ದ ನಮಗೆ ಹೋರಾಟ ಹೊಸದೇನಲ್ಲ ಹಿಂದೆ ಇಲಾಖೆಯ ದಬ್ಬಾಳಿಕೆಗೆ ಮಸರೂರು ಗ್ರಾಮದಲ್ಲಿ ಮೃತಪಟ್ಟ ರೈತನಿಗೆ ಪರಿಹಾರವನ್ನು ಹೋರಾಟದ ಮೂಲಕವೇ ಪಡೆದುಕೊಳ್ಳಲಾಯಿತು ಹಾಗೇಯೆ ರೈತ ತಿಮ್ಮಪ್ಪನ ಕುಟುಂಬಕ್ಕೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.
ಕೆಲವು ದಿನಗಳ ಹಿಂದೆ ಕರ್ನಾಟಕದ ಆನೆ ಕೇರಳದಲ್ಲಿ ರೈತನೊಬ್ಬನನ್ನು ಸಾಯಿಸಿದ್ದಕ್ಕೆ ಕೂಡಲೇ ಪರಿಹಾರ ಕೊಟ್ಟಿದ್ದರು ಅದೇ ಪ್ರಕಾರ ಬಸವಾಪುರದ ರೈತನ ಕುಟುಂಬಕ್ಕೂ ನಾಳೆ ಸಂಜೆಯೊಳಗೆ 15 ಲಕ್ಷ ಪರಿಹಾರ ನೀಡಬೇಕು,ರೈತ ತಿಮ್ಮಪ್ಪ ತನ್ನ ತೋಟದ ಪಕ್ಕದಲ್ಲಿನ ಕಾಡಿಗೆ ದರಗಲು ತರಲು ಹೋಗಿದ್ದಾನೆಯೇ ಹೊರತು ಕೊಡಲಿ ಹಿಡಿದು ಮರ ಕಡಿಯಲು ಹೋಗಿರಲಿಲ್ಲ ಅರಣ್ಯ ಇಲಾಖೆಯವರು ಏನಾದರೂ ಕಥೆ ಕಟ್ಟಿದರೆ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ , ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್ , ಮುಖಂಡರುಗಳಾದ ಎಂ ಬಿ ಮಂಜುನಾಥ್ , ಆರ್ ಟಿ ಗೋಪಾಲ್ , ಸುಂದರೇಶ್ , ಸುಧೀಂದ್ರ ಪೂಜಾರಿ ,ನಾಗಾರ್ಜುನ ಸ್ವಾಮಿ, ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್