ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News
ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19) ಬಂಧಿತ ಆರೋಪಿಗಳಾಗಿದ್ದಾರೆ.
ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ, ಮತ್ತು ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ತಿಪ್ಪೇಸ್ವಾಮಿ ಪೊಲೀಸ್ ನಿರೀಕ್ಷಕರು ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ 1) ಮೋಹನ, 29 ವರ್ಷ, ಗಾಡಿಕೊಪ್ಪ ಶಿವಮೊಗ್ಗ ಮತ್ತು 2) ಮಿಥುನ್ 19 ವರ್ಷ ಗೋಪಾಳ ಶಿವಮೊಗ್ಗ ಇವರನ್ನು ವಶಕ್ಕೆ ಪಡೆದು, ಸದರಿಯವರಿಂದ ಅಂದಾಜು ಮೌಲ್ಯ 75,000/- ರೂ ಗಳ ಒಟ್ಟು 715 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತುಪಡಿಸಿಕೊಂಡು, ಆರೋಪಿತರ ವಿರುದ್ಧ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0044/2024 ಕಲಂ 20 (ಬಿ) II (ಎ) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್