ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News


ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ.

ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ.

ನಡೆದಿದ್ದೇನು..??

ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿತ್ತು. ಕೋರ್ಟ್‌ನಲ್ಲಿ ಜಮೀನು ಶೇಷನಾಯ್ಕನ ಪರವಾಗಿ ಆಗುವ ಸಾಧ್ಯತೆ ಇತ್ತು ಎನ್ನಲಾಗುತ್ತಿದೆ.


ಈ ಬೆಳವಣಿಗೆಗಳಿಂದ ಅಸಮಾಧಾನಗೊಂಡಿದ್ದ ಮಂಜಾನಾಯ್ಕ್ ರಚರ ಪುತ್ರ ಅಖಿಲೇಶ್‌ ನಾಯ್ಕ ಇವತ್ತು ಜಮೀನಿನಲ್ಲಿ ಸತೀಶ್‌ ನಾಯ್ಕ್ ಕೆಲಸ ಮಾಡಲು ಬಂದಿದ್ದ ವೇಳೆ ಏಕಾಏಕಿ ದಾಳಿ ನಡೆಸಿ ಕನ್ಲಿಯಿಂದ ಕೊಚ್ಚಿ ಸತೀಶ್‌ ನಾಯ್ಕ್ ನನ್ನು ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಪಿ ಮಿಥುನ್‌ ಕುಮಾರ್‌ ಪ್ರಕರಣ ಸಂಬಂಧ ಆರೋಪಿ ಅಖಿಲೇಶ್‌ ನಾಯ್ಕನನ್ನು ಬಂಧಿಸಲಾಗಿದೆ. ಸತೀಶ್‌ ನಾಯ್ಕ ತನ್ನ ಜಮೀನಿನಲ್ಲಿ ಕೆಲಸ ಮಾಡುವಾಗ ಜಮೀನು ವಿಚಾರಕ್ಕೆ ಗಲಾಟೆ ತೆಗೆದು ಅಖಿಲೇಶ್‌ ಹಾಗೂ ಆತನ ಕಡೆಯವರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ ಎಂದಿದ್ದಾರೆ.

ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ :

ಜಮೀನು ವಿಚಾರದಲ್ಲಿ ಸತೀಶ್ ಎಂಬ ಯುವಕನನ್ನ ಬರ್ಬರ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಆರೋಪಿ‌ ಮಂಜನಾಯ್ಕ್ ಮನೆಯ ಮೇಲೆ ಕಲ್ಲು ತೂರಿದ್ದಾರೆ.

ನ್ಯಾಯಾಲದಲ್ಲಿ ಸತೀಶ್ ಪರ ತೀರ್ಪು ಬಂದಿದ್ದರೂ ವ್ಯಾಜ್ಯದ ಎದುರಾಳಿಯಾದ ಮಂಜನಾಯ್ಕ ಮತ್ತು ಆತನ ಪುತ್ರ ಗ್ರಾಮದಲ್ಲಿ ಒಳ್ಳೆ ಹೆಸರು ಪಡೆದಿದ್ದ ಸತೀಶ್ ನನ್ನ ಕೊಲೆ ಮಾಡಿದ್ದಕ್ಕೆ ಅವರ ಮನೆಯ ಮೇಲೆ ರೊಚ್ಚಿಗೆದ್ದ‌ ಗ್ರಾಮಸ್ಥರು ಕಲ್ಲು ತೂರಿದ್ದಾರೆ. ಪೊಲೀಸ್ ಸಿಬ್ಬಂದಿಗಳಿಗೆ ಕಲ್ಲು ಬಿದ್ದು ಗಾಯಗಳಾಗಿದೆ.

ಮನೆಯಲ್ಲಿದ್ದ ಆರೋಪಿಯ ಕುಟುಂಬಸ್ಥರರನ್ನ ಪೊಲೀಸರು ರಕ್ಷಣೆಯಲ್ಲಿ ಬೇರೇಡೆಗೆ ವರ್ಗಾಯಿಸಲಾಗಿದೆ. ಪರಿಸ್ಥಿತಿ ಬಿಗುವಿನಿಂದ ಕೂಡಿದೆ ಎನ್ನಲಾಗುತ್ತಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago