ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ.
ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು.
ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಬೃಹತ್ ಹಗರಣ ನಡೆದಿದೆ. ಅದರಲ್ಲಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಅಕೌಂಟೆಂಟ್ ಹಾಗೂ ಅಧಿಕಾರಿಗಳು ಮಾಡಿದ ತಪ್ಪನ್ನು ನನ್ನ ಮೇಲೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್ ಹಾಗೂ ಯೂನಿಯನ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶುಚಿಸ್ಮಿತ ಇವರೇ ನನ್ನ ಸಾವಿಗೆ ಕಾರಣ ಎಂದು ಚಂದ್ರಶೇಖರ್ ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್