ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ
ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನ ಹಾಗೂ ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಾದ ರಿಪ್ಪನ್ಪೇಟೆ ಸಮೀಪದ ಕೆಂಚನಾಳ ಗ್ರಾಮದ ಗಜೇಂದ್ರ @ ಗಜ (37) ಸಾಗರ ತಾಲೂಕಿನ ಆಚಾಪುರದ ಮಹಮ್ಮದ್ ಬೇಗ್ (38), ಇಬ್ಬರನ್ನ ದಸ್ತಗಿರಿ ಮಾಡಲಾಗಿದೆ.
ಆರೋಪಿಗಳಿಂದ 1,60,000/ ರೂ ಮೌಲ್ಯದ 2 ಕೆಜಿ 150 ಗ್ರಾಂ ತೂಕದ ಒಣ ಗಾಂಜಾ ಮತ್ತು ಅಂದಾಜು ಮೌಲ್ಯ 2,50,000 ರೂ ಗಳ ಓಮಿನಿ ಕಾರನ್ನು ಸೀಜ್ ಮಾಡಲಾಗಿದೆ.
ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ ಭೂಮರೆಡ್ಡಿ, ಎ. ಜಿ ಕಾರಿಯಪ್ಪರ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರರ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆಯ ಪಿಐ ಅಶ್ವತ್ ಗೌಡ ಜೆ, ಪಿಎಸ್ ಐ ಶಿವನಗೌಡ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ದಾಳಿ ನಡೆಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್