ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ

ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ.

ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು.

ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಪ್ರದೀಪ್ ತಮ್ಮ ಬೈಕ್‌ನಲ್ಲಿ ನ್ಯಾಮತಿಯ ದೊಡ್ಡೆತ್ತಿನಳ್ಳಿಯ ಕಡೆಗೆ ಹೊರಟಿದ್ದರು. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸ ಅರಿಯದ ಅವರು ಅದೇ ರೋಡಿನಲ್ಲಿ ಮುಂದಕ್ಕೆ ಹೋಗಿದ್ದರು. ಪರಿಣಾಮ ಹರಿಯುವ ನೀರಿನ ರಭಸದಲ್ಲಿ ಅವರು ಕೊಚ್ಚಿಕೊಂಡು ರಸ್ತೆಯ ಪಕ್ಕದಲ್ಲಿದ್ದ ಪ್ಲಾಂಟ್‌ನೊಳಗೆ ಹೋಗಿಬಿದ್ದದ್ದರು.

ಈ ದೃಶ್ಯವನ್ನು ಗಮನಿಸಿದ ಓರ್ವರು 112 ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಆಗ ರಾತ್ರಿ11:30ಆಗಿತ್ತು. ಕರೆ ಸ್ವೀಕರಿಸಿದ ರೆಸ್ಪಾಂಡೆಂಟ್ ರಂಗನಾಥ್ ಹಾಗೂ ಡ್ರೈವರ್ ಪ್ರಸನ್ನ ಕುವೆಂಪು ನಗರದಲ್ಲಿದ್ದರು. ಐದು ನಿಮಿಷದಲ್ಲಿ ಯುವಕ ಬಿದ್ದಿದ್ದ ಸ್ಥಳಕ್ಕೆ ಬಂದಿದ್ದಾರೆ. ಆಗ ಅಲ್ಲೊಬ್ಬರು ವೃದ್ಧರು ನಿಂತುಕೊಂಡು ವ್ಯಕ್ತಿಯೊಬ್ಬನ ರಕ್ಷಣೆಗೆ ಮುಂದಾಗಿದ್ದು ಕಂಡಿದೆ. ತಕ್ಷಣವೇ ವಾಹನದಿಂದ ಇಳಿದ ಸಿಬ್ಬಂದಿ ಖುದ್ದು ರಕ್ಷಣಾ ಕಾರ್ಯಾಚರಣೆಗೆ ಇಳಿದರು.


ಕೊಚ್ಚಿ ಹೋದ ಬೈಕ್ :


ಈ ನಡುವೆ ಪ್ರದೀಪ್ ನೀರಿನಲ್ಲಿ ಕೊಚ್ಚಿ ಹೋಗುವ ಸಂದರ್ಭದಲ್ಲಿ ಅವರ ಬೈಕ್ ಕೂಡ ನೀರಿನಲ್ಲಿ ಕೊಚ್ಚಿ ಹೋಗಿತ್ತು. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಆದಷ್ಟು ಬೈಕ್‌ನ್ನು ಹಿಡಿದುಕೊಳ್ಳುವ ಪ್ರ‍್ರಯತ್ನ ಮಾಡಿದ್ದರು. ಸಾಧ್ಯವಾಗದಿದ್ದಾಗ ಪ್ರಯತ್ನ ಕೈ ಚೆಲ್ಲಿದ್ದರು. ಮೂರು ಅಡಿ ನೀರಿದ್ದರಿಂದ ರಾತ್ರಿ ಬೈಕ್ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ 112 ವಿಭಾಗದ ಸಿಬ್ಬಂದಿ ನೀರು ಹರಿದ ಪ್ರದೇಶದಲ್ಲಿ ಬೈಕ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ನಡೆದ ಜಾಗದಿಂದ ಸುಮಾರು ದೂರ ಕೊಚ್ಚಿ ಹೋಗಿದ್ದು ಮರವೊಂದರ ಬುಡದಲ್ಲಿ ಪತ್ತೆಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago