ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!


ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ.

ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ  ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ತನಿಖಾ ತಂಡವು ಈ ದಿನ ದಿನಾಂಕ 18-05-2024 ರಂದು ಪ್ರಕರಣದ ಕಳುವು ಆರೋಪಿ ಶಿವಮೊಗ್ಗ ಹಸೂಡಿ ಗ್ರಾಮದ ಹಕ್ಕಿಪಿಕ್ಕಿ ಕ್ಯಾಂಪ್ ನ ನಿವಾಸಿ ಬಸಣ್ಣ @ ಶರಫೀಯ, (26), ಈತನನ್ನು ದಸ್ತಗಿರಿ ಮಾಡಲಾಗಿದೆ. ಅಂದಾಜು ಮೌಲ್ಯ 4,85,000/- ರೂಗಳ ಒಟ್ಟು 87 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.


ಪ್ರಕರಣದ ಆರೋಪಿತರ ಮತ್ತು ಕಳುವಾದ ಮಾಲು ಪತ್ತೆಗಾಗಿ  ಮಿಥುನ್ ಕುಮಾರ್ ಜಿ. ಕೆ. ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ, ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆರವರ ಮಾರ್ಗಗದರ್ಶನದಲ್ಲಿ ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ ಮತ್ತು ರಮೇಶ್ ರಾವ್, ಸಿಪಿಐ ಸೊರಬ ವೃತ್ತ ರವರ ಮೇಲ್ವಿಚಾರಣೆಯಲ್ಲಿ, ಶಿವಾನಂದ ವೈ ಕೆ ಪಿಎಸ್ಐ ಮತ್ತು ವಿಟ್ಟಲ್ ಎಂ ಅಗಾಸಿ ಪಿಎಸ್ಐ ಆನವಟ್ಟಿ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ ಕಲಂದರ್,
ಗಿರೀಶ್, ಪಿಸಿ ಜಗದೀಶ್, ಮಂಜುನಾಥ್,ಮಲ್ಲೇಶ್,ಹರಿಪ್ರಸಾದ್,ಚಿಕ್ಕಪ್ಪ ಕಡಕೋಳ, ಹನುಮಂತ ಹಾಗೂ ಬೆರಳಚ್ಚು ವಿಭಾಗ ಶಿವಮೊಗ್ಗದ ಅಧಿಕಾರಿಗಳಾದ ಕೆಂಚಪ್ಪ ಬಿ, ಪಿಐ, ರಮೇಶ್ ನಾಯ್ಕಾ, ಎ.ಎಸ್.ಐ, ಮಹಾದೇವಮ್ಮ ಎ.ಎಸ್.ಐ, ಮಲ್ಲಿಕಾರ್ಜುನ ಸ್ವಾಮಿ ಹೆಚ್.ಸಿ, ತ್ಯಾಗರಾಜ್, ಪಿ ಸಿ, ಮತ್ತು ಕಿರಣ್ ಪಿ.ಸಿ ರವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡದ ಈ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆರವರು ಪ್ರಶಂಸಿಸಿ ಅಭಿನಂದನೆ ಸಲ್ಲಿಸಿರುತ್ತಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago