w
Headlines
Home » ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ ಮುಖ್ಯರಸ್ತೆ, ಟಿಪ್ಪು ನಗರ ಮುಖ್ಯರಸ್ತೆ ಮೂಲಕ ಅಣ್ಣಾನಗರ ಮಿಳಗಟ್ಟ, ಇಂದಿರಾ ಕ್ಯಾಂಟೀನ್ ಮುಂಭಾಗದಿಂದ, ಕೆಎಸ್‌ಆರ್‌ಟಿಸಿ ಮುಂಭಾಗದಿಂದ, ಡಬಲ್ ರೋಡ್, ಎನ್.ಟಿ.ರಸ್ತೆ ಬಲಭಾಗದವರೆಗೆ ಹರಕೆರೆ, ಕುರುಬರ ಪಾಳ್ಯದಿಂದ ಸೀಗೇಹಳ್ಳಿ ವೃತ್ತದವರೆಗೆ ನಡೆದ ರೋಡ್ ಷೋನಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಕರ್ನಾಟಕದ ಚರಿತ್ರೆಯ ಮೊದಲ ಪುಟ ಶಿವಮೊಗ್ಗ ಜಿಲ್ಲೆಯಿಂದ ಆರಂಭವಾಗುತ್ತದೆ. ಇಲ್ಲಿ ಜನ ಸಮಾನ್ಯರಿಗೆ ಸೇವೆ ಒದಗಿಸಲು ಗೀತಕ್ಕ ಉತ್ತಮ ನಾಯಕಿ. ಆದ್ದರಿಂದ ಈ ಬಾರಿ ಗೀತಕ್ಕಗೆ ಮತ ನೀಡಿ ಆಶೀರ್ವದಿಸಿ’ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ ಮಾತನಾಡಿ, ‘ಸಮಾಜದಲ್ಲಿ ಬಡತನ, ಹಸಿವು, ಅಸಮಾನತೆಯ ಪಿಡುಗು ನಿವಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ದುಡಿಯುತ್ತಿದೆ. ಅದೇ ಉದ್ದೇಶಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ’ ಎಂದರು.

‘ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ಕರೆತರುವುದು. ಅದು ಖಂಡಿತ ನೆರವೇರಲಿದೆ. ಅದೇ ರೀತಿ, ಗ್ಯಾರಂಟಿಗಳು ಬಡವರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ತಲುಪುತ್ತಿವೆ. ಇದಕ್ಕೆ ನ್ಯಾಯ ಒದಗಿಸಲು ಎಲ್ಲರೂ ಕೈ ಜೋಡಿಸಬೇಕು. ಆದ್ದರಿಂದ, ಈ ಬಾರಿ ಮತ ನೀಡಿ ಆಶೀರ್ವದಿಸಿ’ ಎಂದರು.

ಗೀತಾ ಶಿವರಾಜಕುಮಾರ್ ‘ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಮತದಾನ ಪ್ರಕ್ರಿಯೆ ಇದೇ ಮೇ 7ರಂದು ನಡೆಯಲಿದೆ. ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ನಿಮ್ಮ ಮನೆ ಮಗಳಾಗಿ ಸ್ಪರ್ಧಿಸಿದ್ದೇನೆ’ ಎಂದು ಗೀತಾ ಶಿವರಾಜಕುಮಾರ್‌ ಹೇಳಿದರು. ‘ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ಜಾತಿ- ಧರ್ಮದವರ ಜೀವನ ಕ್ರಮ ಸುಧಾರಿಸಲು ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದ್ದರಿಂದ ಸರ್ಕಾರದ ಈ ಋಣ ತೀರಿಸುವ ಹೊಣೆ ಎಲ್ಲರದ್ದಾಗಿದೆ. ವಿಪಕ್ಷಗಳು ಒಡ್ಡುವ ಹಣ- ಹೆಂಡದಂತಹ ಆಮಿಷಗಳಿಗೆ ಒಳಗಾಗದೆ ಪೊಳ್ಳು ಭರವಸೆಗಳಿಗೆ ಮರುಳಾಗದೆ ಕ್ಷೇತ್ರ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದರೆ ನನಗೆ ಮತ ನೀಡಿ ಆಶೀರ್ವದಿಸಿ’ ಎಂದು ಕೋರಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.