ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft


ಬೈಕ್ ಕಳ್ಳತನವಾಗಿದ್ದ ಪ್ರಕರಣವೊಂದರ ಬೆನ್ನತ್ತಿದ್ದ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನೂ ಬಂಧಿಸಿದ್ದಾರೆ.

ಬೈಕ್ ಕಳ್ಳತನದ ಪ್ರಮುಖ ಆರೋಪಿ 1.ಅಲ್ಲಾ ಭಕ್ಷ್ @ ಹರ್ಬಾಜ್ @ ಪೊಟ್ಯಾಟೋ, 19 ವರ್ಷ, ಅಂಬೇಡ್ಕರ್ ನಗರ, ಶಿವಮೊಗ್ಗ ಟೌನ್. ಹಾಗೂ ಒಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದು ಸದರಿಯವರಿಂದ ಅಂದಾಜು ಮೌಲ್ಯ 90,000/- ರೂಗಳ  02 ಬೈಕ್ ಗಳನ್ನು  ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


ದಿನಾಂಕಃ 14-05-2024  ರಂದು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಕನಕನಗರದ ವಾಸಿ ಶಿವು, 35  ವರ್ಷ ರವರು ತಮ್ಮ ವಾಸದ ಮನೆಯ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ  ಕಲಂ 379  ಐಪಿಸಿ ರೀತ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದರು.

ಪ್ರಕರಣ ಕುರಿತು ತನಿಖೆ ಆರಂಭಿಸಿದ ಬಸವರಾಜ್, ಪಿಐ ಕುಂಸಿ ಪೊಲೀಸ್ ಠಾಣೆ, ಶಾಂತರಾಜ್, ಪಿಎಸ್ಐ ಪಿ,ಮತ್ತು ಸಿಬ್ಬಂದಿಗಳಾದ ಸಿಹೆಚ್ಸಿ, ಪ್ರಕಾಶ್, ಎ.ಹೆಚ್.ಸಿ  ಶಿವಪ್ಪ ಸಿಪಿಸಿ ರವರಾದ  ಶಶಿಧರ, ರಾಜು ಕಾಂಬ್ಳೆ, ಬುರಾನ್, ಆದರ್ಶ, ವಿನಾಯಕ ಬಿ.ಟಿ, ಶಶಿಕುಮಾರ್, ಮಂಜುನಾಥ, ದಿನೇಶ್ ರಾವ್, ಜಯ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ಕಛೇರಿ ತಾಂತ್ರಿಕ ವಿಭಾಗದ ಸಿಬ್ಬಂಧಿಗಳಾದ ಗುರುರಾಜ್, ಇಂದ್ರೇಶ್, ಮತ್ತು ವಿಜಯ್ ಕುಮಾರ್ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago