ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು
ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನೊಬ್ಬನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು ಕೋಮಾ ಕ್ಕೆ ಜಾರಿದ ಘಟನೆ ಸಂಬಂಧ ತಡವಾಗಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿ 169 ನಲ್ಲಿ ಗಾಜನೂರು ಸಮೀಪ ಚೆಕ್ಪೋಸ್ಟ್ ಹತ್ತಿರದಲ್ಲಿರುವ ತೋಟದಲ್ಲಿನ ತೆಂಗಿನ ಮರ ಹೆದ್ದಾರಿ ಬದಿಗೆ ವಾಲಿಕೊಂಡಿದೆ. ಕಳೆದ ಏಳನೇ ತಾರೀಖು ಇದೇ ಮಾರ್ಗದಲ್ಲಿ 16 ವರ್ಷದ ಯುವಕನೊಬ್ಬ ಇನ್ನೊಬ್ಬರ ಜೊತೆಗೆ ಬೈಕ್ನಲ್ಲಿ ಬರುತ್ತಿದ್ದ. ಚೆಕ್ಪೋಸ್ಟ್ ಸಮೀಪ ಬರುವ ಹೊತ್ತಿಗೆ ಜೋರಾಗಿ ಗಾಳಿ ಬೀಸಿದ ಪರಿಣಾಮವಾಗಿ ತೆಂಗಿನ ಮರದಿಂದ ಕಾಯಿ ಬಿದ್ದಿದೆ. ಹೀಗೆ ಬಿದ್ದ ತೆಂಗಿನ ಕಾಯಿ ಬೈಕ್ನಲ್ಲಿ ಹಿಂಬದಿ ಕುಳಿತಿದ್ದ 16 ವರ್ಷದ ಯುವಕನ ತಲೆ ಮೇಲೆ ಬಿದ್ದಿದೆ.
ಪರಿಣಾಮ ತೀವ್ರವಾಗಿ ಗಾಯಗೊಂಡ ಆತನನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಈಗ ಆತ ಕೋಮಕ್ಕೆ ಜಾರಿದ್ದಾನೆ.
ಯ್ವಕನ ಪೋಷಕರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧೀಕಾರ ಹಾಗೂ ಬಿದ್ದ ತೆಂಗಿನಕಾಯಿಯ ಮರವಿರುವ ತೋಟದ ಮಾಲೀಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್