Headlines

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu


ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.


ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

About The Author

Leave a Reply

Your email address will not be published. Required fields are marked *

Exit mobile version