ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
Weather Report:
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ(Rain)ಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇಂದು ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಂಗಳವಾರ ವರುಣಾರ್ಭಟ ಜೋರಾಗಿತ್ತು. ಉತ್ತರ ಕನ್ನಡದ ಸಿದ್ದಾಪುರದಲ್ಲಿ 52 ಮಿಮೀ, ಶೃಂಗೇರಿಯಲ್ಲಿ 50 ಮಿಮೀ ಮಳೆ ಸುರಿದಿದೆ.ಕೆಲವೆಡೆ ಸಾಧಾರಣ ಪ್ರಮಾಣದಲ್ಲಿ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಿದೆ ತಿಳಿದುಬಂದಿದೆ.
ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ ಎರಡು ದಿನ ಹಾಗೂ ಶಿವಮೊಗ್ಗ, ಹಾಸನ, ಚಾಮರಾಜನಗರದಲ್ಲಿ ಮೇ 15ರಂದು, ದಣ ಕನ್ನಡ, ಉಡುಪಿಯಲ್ಲಿ ಮೇ 17ರಿಂದ ಮುಂದಿನ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯಿಂದ ಯೆಲ್ಲೋ ಅರ್ಲಟ್ ಘೋಷಿಸಿದೆ. ಉತ್ತರ ಕನ್ನಡದಲ್ಲಿ ಮೇ 18, ಮೇ 19ರಂದು ಯೆಲ್ಲೋ ಅರ್ಲಟ್ ಇರಲಿದೆ. ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್