ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು ಜರುಗಲಿವೆ.

ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ನಂತರ ಸಾಮೂಹಿಕ ಆನ್ನಸಂತರ್ಪಣೆ ನಡೆಯಲಿದ್ದು ಸಕಲ ಭಕ್ತಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನಾಶೀರ್ವಾದ ಪಡೆಯುವಂತೆ ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.

ಮೇ 14ಕ್ಕೆ“ಶ್ರೀಶೈಲ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ’’ಗುರು-ವಿರಕ್ತರಿಂದ ಧರ್ಮಸಮಾರಂಭ’’

ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ಬೆಳಕೋಡು ಗ್ರಾಮದ ಬಿ.ಎಲ್.ಹಾಲಸ್ವಾಮಿಗೌಡರ ಅಮೃತ ವರ್ಷಾಚಣೆಯ ಅಂಗವಾಗಿ ಮೇ.14 ರಂದು ಬೆಳಗ್ಗೆ 9 ಗಂಟೆಗೆ ಶ್ರೀಶೈಲ ಶ್ರೀಮದ್‌ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ ಶ್ರೀ 1008 ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾರುಗಳ ಇಷ್ಟಲಿಂಗ ಮಹಾಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇಷ್ಟಲಿಂಗ ಮಹಾಪೂಜೆಯ ನಂತರ ಗುರು-ವಿರಕ್ತ ಜಗದ್ಗುರುಗಳ ದಿವ್ಯಸಾನಿಧ್ಯದಲ್ಲಿ ಧರ್ಮಜಾಗೃತಿ ಸಮಾರಂಭವು 11 ಗಂಟೆಗೆ ಜರುಗಲಿದ್ದು ಈ ಧರ್ಮಸಮಾರಂಭದ ದಿವ್ಯಸಾನಿಧ್ಯವನ್ನು ಶ್ರೀಶೈ¯ ಶ್ರೀಮದ್‌ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ ಶ್ರೀ 1008 ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾರು ಹಾಗೂ ಆನಂದಪುರ ಮುರುಘಾರಾಜೇಂದ್ರ ಮಹಾಸಂಸ್ಥಾನ ಮಠದ ಶ್ರೀಮನ್ಮಹಾರಾಜ ನಿರಂಜನ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡುವರು.

ಈ ಧರ್ಮಜಾಗೃತಿ ಸಭೆಯಲ್ಲಿ ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ,ತೊಗರ್ಸಿ ಕ್ಯಾಸನೂರು ಹಿರೇಮಠದ ಷ.ಬ್ರ,ಮಹಾಂತ ದೇಶಿಕೇಂದ್ರ ಸ್ವಾಮಿಗಳು,ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ,ಉಪಸ್ಥಿತರಿರುವರು  ಜಗದ್ಗುರುಗಳ ಇಷ್ಟ ಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದಲ್ಲಿ ಭಾಗವಹಿಸಿ ದರ್ಶನಾಶೀರ್ವಾದ ಪಡೆಯುವಂತೆ ಕೋರಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago